Corona Report : ಕಳೆದ 24 ಗಂಟೇಲಿ 38,164 ಕೇಸ್ ಪತ್ತೆ
ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 38,164 ಹೊಸ ಕೊರೊನಾ ವೈರಸ್ ಕೇಸ್ ಗಳು ಪತ್ತೆಯಾಗಿದ್ದು, ಹೆಮ್ಮಾರಿ ಸೋಂಕಿಗೆ 499 ಮಂದಿ ಕೊನೆಯುಸಿರೆಳೆದಿದ್ದಾರೆ.
ಇದರೊಂದಿಗೆ ಭಾರತದಲ್ಲಿ ಒಟ್ಟಾರೆ ಕೊರೊನಾ ಸೋಂಕಿತರ ಸಂಖ್ಯೆ 31,144,229ಕ್ಕೆ, ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 414,108 ಕ್ಕೆ ತಲುಪಿದೆ ಎಂದು ಕೇಂದ್ರ ಆರೋಗ್ಯ ಇಲಾಖೆಯ ಸಚಿವಾಲಯ ತಿಳಿಸಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ 38,660 ಜನರು ಸೋಂಕಿನಿಂದ ಚೇತರಿಸಿಕೊಳ್ಳುವ ಮೂಲಕ ಈವರೆಗೂ ಕೊರೊನಾದಿಂದ ಚೇತರಿಸಿಕೊಂಡವರ ಒಟ್ಟು ಸಂಖ್ಯೆ 30,308,456 ಏರಿಕೆಯಾಗಿದೆ. ದೇಶದಲ್ಲಿನ್ನೂ 421665 ಸಕ್ರಿಯ ಪ್ರಕರಣಗಳಿವೆ.