Corona Report : ಕಳೆದ 24 ಗಂಟೇಲಿ 43,733 ಕೇಸ್ ಪತ್ತೆ
ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 43,733 ಹೊಸ ಕೋವಿಡ್ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 4,59,920 ಆಗಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ದೇಶದಾದ್ಯಂತ ನಿನ್ನೆ 43,733 ಹೊಸ ಕೊರೊನಾ ಕೇಸ್ ಗಳು ಪತ್ತೆಯಾಗಿವೆ. ಇದೇ ಅವಧಿಯಲ್ಲಿ 400 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.
ದೇಶದಲ್ಲಿ ಪ್ರಸ್ತುತ 4,59,920 ಸಕ್ರಿಯ ಪ್ರಕರಣಗಳಿದ್ದು, ಚೇತರಿಕೆ ಪ್ರಮಾಣ ಶೇ. 97.18 ಕ್ಕೆ ಏರಿಕೆಯಾಗಿದೆ.
ಕೇರಳದಲ್ಲಿ ನಿನ್ನೆ 14,373 ಹೊಸ ಪ್ರಕರಣಗಳು ವರದಿಯಾಗಿದ್ದು, ಈ ತಿಂಗಳಲ್ಲಿ ದಾಖಲಾದ ಅತೀ ಹೆಚ್ಚು ಪ್ರಕರಣ ಇದಾಗಿದೆ. ಮಹಾರಾಷ್ಟ್ರದಲ್ಲಿ 8,418 ಹೊಸ ಪ್ರಕರಣಗಳು ವರದಿಯಾಗಿವೆ.
ನಿನ್ನೆ 34,703 ಹೊಸ ಪ್ರಕರಣಗಳು ಪತ್ತೆಯಾಗಿತ್ತು. ಆದರೆ, ಇಂದು ಹೊಸ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ.