ಕೊರೊನಾ ರಿಪೋರ್ಟ್ : ಕಳೆದ 24 ಗಂಟೇಲಿ 46,164 ಮಂದಿಗೆ ಸೋಂಕು Corona Report saaksha tv
ನವದೆಹಲಿ : ಭಾರತದಲ್ಲಿ ಕೊರೊನಾ ಸೋಂಕಿನ ಏರಿಳಿತ ಮುಂದುವರೆದಿದೆ.
ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 46,164 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. 607 ಜನ ಮಹಾಮಾರಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೊನಾ ವೈರಸ್ ನ ಸೋಂಕಿತರ ಸಂಖ್ಯೆ 3,25,58,530ಕ್ಕೆ ಏರಿಕೆಯಾಗಿದೆ.
ಕೋವಿಡ್ ಗೆ ಸಾವನ್ನಪ್ಪಿದವರ ಸಂಖ್ಯೆ 436365 ಕ್ಕೆ ಏರಿಕೆಯಾಗಿದೆ.
ಇನ್ನು ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 34159 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಈವರೆಗೆ 31788440 ಜನರು ಕೋವಿಡ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ದೇಶದಲ್ಲಿ 333725 ಕೋವಿಡ್ ಸಕ್ರಿಯ ಪ್ರಕರಣಗಳಿವೆ.









