ಕೊರೊನಾ ರಿಪೋರ್ಟ್ : ದೇಶದಲ್ಲಿ ಮತ್ತೆ ಸೋಂಕಿತರ ಸಂಖ್ಯೆ ಏರಿಕೆ Corona Report
ನವದೆಹಲಿ : ಭಾರತದಲ್ಲಿ ಕಳೆದ ಎರಡು ದಿನಗಳಿಂದ ಕೊರೊನಾ ಸೋಂಕಿತರ ಸಂಖ್ಯೆ ಮತ್ತೆ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 45,892 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 45,892 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಇದೇ ಅವಧಿಯಲ್ಲಿ 817 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,07,09,557 ತಲುಪಿದೆ.
ಇದುವರೆಗೂ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4,05,028ಕ್ಕೆ ಏರಿಕೆಯಾಗಿದೆ.
ಇನ್ನು 24 ಗಂಟೆಯಲ್ಲಿ 44,291 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದು,2,98,43,825 ಜನರು ಕೋವಿಡ್ ನಿಂದ ಗುಣಮುಖರಾಗಿದ್ದಾರೆ.
ದೇಶದಲ್ಲಿನ್ನೂ 4,60,704 ಕೋವಿಡ್ ಸಕ್ರಿಯ ಪ್ರಕರಣಗಳಿವೆ. ದೇಶದಲ್ಲಿ ಈವರೆಗೆ 36,48,47,549 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.