ಬೆಂಗಳೂರು: ಬೆಂಗಳೂರು ನಗರದಲ್ಲಿ ಇಂದು ಮತ್ತೆ ಬರೋಬ್ಬರಿ 274 ಪ್ರಕರಣಗಳು ಪತ್ತೆಯಾಗಿದ್ದು, ಸಿಲಿಕಾನ್ ಸಿಟಿ ಜನರು ಬೆಚ್ಚಿ ಬೀಳುವಂತೆ ಮಾಡಿದೆ. ಇದರೊಂದಿಗೆ ರಾಜ್ಯಾದ್ಯಂತ ಕೊರೊನಾ ಅಬ್ಬರ ಮುಂದುವರೆದಿದ್ದು, 361 ಮಂದಿಗೆ ಪಾಸಿಟಿವೆ ಬಂದಿದೆ. ಜತೆಗೆ ಮಹಾಮಾರಿ ಕೊರೊನಾಗೆ 8 ಮಂದಿ ಉಸಿರು ನಿಲ್ಲಿಸಿದ್ದಾರೆ.
ಬೆಂಗಳೂರು ದಕ್ಷಿಣವೊಂದರಲ್ಲೇ 67 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ನಂತರ ಬಳ್ಳಾರಿಯಲ್ಲಿ 26, ಬೀದರ್ 8. ಉಡುಪಿಯಲ್ಲಿ 14 ಪ್ರಕರಣಗಳು ದಾಖಲಾಗಿವೆ. ವಿಧಾನಸೌಧದ ಭದ್ರತಾ ವಿಭಾಗದ ಡಿಸಿಪಿ ಕಚೇರಿಯ ಸಿಬ್ಬಂದಿಗೂ ಕೊರೊನಾ ಪಾಸಿಟಿವ್ ಬಂದಿದೆ. ಡಿಸಿಪಿ ಕಚೇರಿಯಲ್ಲಿ ರೈಟರ್ ಆಗಿ ಕೆಲಸ ಮಾಡುತ್ತಿದ್ದ ಸಿಬ್ಬಂದಿಗೆ ಸೋಂಕು ದೃಢವಾದ ಹಿನ್ನೆಲೆಯಲ್ಲಿ ವಿಧಾನಸೌಧದ ನೆಲಮಹಡಿಯ ಡಿಸಿಪಿ ಕಚೇರಿಯನ್ನು ಸೀಲ್‍ಡೌನ್ ಮಾಡಲಾಗಿದೆ.
ಶಾಸಕರ ಭವನದ ಎಲ್ಲಾ ಸಿಬ್ಬಂದಿಗೆ ಕೊರೊನಾ ಪರೀಕ್ಷೆ ಮಾಡಲಾಗುತ್ತಿದೆ. ಜತೆಗೆ ಶಾಸಕರ ಭವನದಲ್ಲಿ ಅನಗತ್ಯವಾಗಿ ತಂಗಿರುವ ಹೊರಗಿನವರನ್ನು ತೆರವು ಮಾಡಲಾಗುತ್ತಿದೆ.
ಆನೇಕಲ್‍ನಲ್ಲೂ 5 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಕಿರಾಣಿ ಅಂಗಡಿ ಮಾಲೀಕನಿಂದ ಐವರಿಗೆ ಸೋಂಕು ಹರಡಿದೆ ಎನ್ನಲಾಗಿದೆ.
ಪಂಜಾಬ್ ಮತ್ತು ಕರ್ನಾಟಕದ ಹಗರಣಗಳಿಗೆ ಸಚಿವರು ಯಾಕೆ ರಾಜೀನಾಮೆ ನೀಡಿಲ್ಲ? ಆಪ್ ಮತ್ತು ಕಾಂಗ್ರೆಸ್ ಗೆ ಪ್ರಹ್ಲಾದ ಜೋಶಿ ಪ್ರಶ್ನೆ
ಧಾರವಾಡ: ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹಿಸುತ್ತಿರುವ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷಗಳ (ಆಪ್) ನೈತಿಕತೆಯನ್ನು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ತೀವ್ರವಾಗಿ ಪ್ರಶ್ನಿಸಿದ್ದಾರೆ....








