ಕೊರೋನಾ ವೈರಸ್ ವೇಗವಾಗಿ ಹಬ್ಬುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಬಿಬಿಎಂಪಿ, ಬೆಂಗಳೂರುನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ (ಒಂದರಿಂದ ಐದನೆಯ ತರಗತಿಯವರೆಗೆ) ಮುಂದಿನ ಆದೇಶದವರೆಗೆ ರಜೆ ಘೋಷಿಸಲಾಗಿದೆ.

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಈ ಕುರಿತು ಟ್ವೀಟ್ ಮಾಡಿದ್ದು ರಾಜ್ಯದ ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಿದಂತೆ ಬಿಬಿಎಂಪಿ, ಬೆಂಗಳೂರುನಗರ ಜಿಲ್ಲೆ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಎಲ್ಲಾ ಪ್ರಾಥಮಿಕ ಶಾಲೆಗಳಿಗೆ ಮುಂದಿನ ಆದೇಶದವರೆಗೆ ರಜೆ ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ, 1-5 ನೇ ತರಗತಿ ಮಾರ್ಚ್ 11 ರಿಂದ 16 ವರೆಗೆ ಮತ್ತು 6-9 ನೇ ತರಗತಿ ಮಾರ್ಚ್ 23 ರ ಒಳಗೆ ಪರೀಕ್ಷೆ ಮುಗಿಸಿ ಶಾಲೆಗಳಿಗೆ ರಜೆ ಘೋಷಣೆ ಮಾಡುವಂತೆ ರಾಜ್ಯದ ಎಲ್ಲಾ ಶಾಲೆಗಳಿಗೆ ಸುತ್ತೋಲೆ ಹೊರಡಿಸಿದೆ.
ಈಗಾಾಗಲೇ ಎಲ್ಲ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ಪ್ರೀ ನರ್ಸರಿ, ಎಲ್‍ಕೆಜಿ ಮತ್ತು ಯುಕೆಜಿ ಮಕ್ಕಳಿಗೆ ರಜೆ ಘೋಷಣೆಯಾದ ಬೆನ್ನಲ್ಲೇ ಅಂಗನವಾಡಿಗಳಿಗೂ ರಜೆ ನೀಡಿ ಆದೇಶಿಸಲಾಗಿದೆ.








