ಬೆಂಗಳೂರು : ಸಿಎಂ ಬಿ.ಎಸ್ ಯಡಿಯೂರಪ್ಪ ಗೃಹ ಕಚೇರಿ ಕೃಷ್ಣಾಗೆ ಮತ್ತೆ ಮಹಾಮಾರಿ ಕೊರೊನಾ ಎಂಟ್ರಿ ಕೊಟ್ಟಿದೆ. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಕೆಲಸ ಮಾಡುತ್ತಿದ್ದಂತ ನಾಲ್ವರು ಸಿಬ್ಬಂದಿಗಳಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ತಿಳಿದು ಬಂದಿದೆ. ಇದರಿಂದ ಉಳಿದ ಸಿಬ್ಬಂದಿಗೂ ಎದೆಯಲ್ಲಿ ನಡುಕ ಶುರುವಾಗಿದೆ.
ಕೆಲ ದಿನಗಳ ಹಿಂದಷ್ಟೆ ಕೃಷ್ಣಾದಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಪೊಲೀಸ್ ಪೇದೆ ಪತಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆ ಅಲ್ಲಿ ಕೆಲಸ ಮಾಡುತ್ತಿದ್ದ ಎಲ್ಲಾ ಸಿಬ್ಬಂದಿಗಳನ್ನು ಕ್ವಾರಂಟೈನ್ ಮಾಡಲಾಗಿತ್ತು. ಹೀಗೆ ಕ್ವಾರಂಟೈನ್ ನಲ್ಲಿದ್ದಂತ ಮೂವರು ಪೊಲೀಸರಿಗೆ ಹಾಗೂ ಓರ್ವ ಅಗ್ನಿಶಾಮಕ ಸಿಬ್ಬಂದಿಗೆ ಇದೀಗ ಕೊರೊನಾ ಸೋಂಕಿರುವುದು ದೃಢಪಟ್ಟಿದೆ. ಹೀಗಾಗಿ ಸಿಎಂ ಗೃಹಕಚೇರಿಯ ಸಿಬ್ಬಂದಿಗಳಿಗೆ ಕೊರೊನಾ ಸೋಂಕಿನ ಭೀತಿ ಎದುರಾಗಿದೆ.