ಮಂಡ್ಯದಲ್ಲಿ ಪೊಲೀಸರಿಗೆ ಕೊರೊನಾ ಆಘಾತ..!
ಮಂಡ್ಯ : ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಅಬ್ಬರ ಮುಂದುವರೆದಿದ್ದು, ಇಂದು ಮತ್ತೆ ಪೊಲೀಸರಿಗೆ ಕೊರೊನಾ ಆಫಾತ ಎದುರಾಗಿದೆ.
ಕೆಲ ದಿನಗಳ ಹಿಂದೆ ಮಂಡ್ಯ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳಿಗೆ ಕೊರೊನಾ ಸೋಂಕು ಧೃಡಪಟ್ಟಿತ್ತು.
ಇವತ್ತು ಮದ್ದೂರು ತಾಲೂಕಿನ ಕೆಸ್ತೂರು ಪೊಲೀಸ್ ಠಾಣೆಯ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ವಕ್ಕರಿಸಿದೆ.
ಠಾಣೆಯ ಓರ್ವ ಸಬ್ ಇನ್ಸ್ಪೆಕ್ಟರ್ ಹಾಗೂ 5 ಮಂದಿ ಪೊಲೀಸ್ ಸಿಬ್ಬಂದಿಗೆ ಕೊರೊನಾ ಸೋಂಕು ಧೃಡಪಟ್ಟಿದೆ.
ಕೆಸ್ತೂರು ಠಾಣಾ ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ.