ಮಡಿಕೇರಿಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮುಗಿಬಿದ್ದ madikeri
ಮಡಿಕೇರಿ : ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ.
ಈ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ವಾರದ ಎರಡು ದಿನ ಅಗತ್ಯವಸ್ತುಗಳ ಖರೀದಿಗೆ ಅವಕಾಶ ನೀಡಿ ಪರ್ಯಾಯ ಮಾರ್ಕೆಟ್ ಗಳನ್ನು ತೆರೆದಿದೆ.
ಆದರೂ ಜನ ಸಾಮಾಜಿ ಅಂತರ ಕಾಯ್ದುಕೊಳ್ಳದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ.
ಜನ ಸಂದಣಿಗೆ ಅವಕಾಶ ನೀಡಬಾರದು ಎಂಬ ಉದ್ದೇಶದಿಂದ ಜಿಲ್ಲಾಡಳಿತ ಮಡಿಕೇರಿ ನಗರದ ಸರ್ಕಾರಿ ಬಸ್ ನಿಲ್ದಾಣ ಮತ್ತು ಎಪಿಎಂಸಿ ಆವರಣದಲ್ಲಿ ಅಂಗಡಿಗಳನ್ನು ತೆರೆದಿದೆ.
ಪ್ರತಿ ಸೋಮವಾರ ಮತ್ತು ಶುಕ್ರವಾರ ಬೆಳಗ್ಗೆ 6 ರಿಂದ 12 ಗಂಟೆಯ ವರೆಗೆ ಅಗತ್ಯ ವಸ್ತುಗಳ ಅಂಗಡಿ ತೆರೆಯಲು ಅವಕಾಶ ಮಾಡಿಕೊಡಲಾಗಿದೆ.
ಸಾಮಾಜಿಕ ಅಂತರ ಕಾಪಾಡಲು ಅಂಗಡಿಗಳ ಮುಂದೆ ಮಾರ್ಕ್ ಗಳನ್ನು ಸಹ ಹಾಕಲಾಗಿದೆ. ಆದರೂ ಜನರು ಸಾಮಾಜಿಕ ಅಂತರವನ್ನು ಮರೆತು ವಸ್ತುಗಳ ಖರೀದಿಗೆ ಮುಂದಾಗಿದ್ದಾರೆ.