ಬಳ್ಳಾರಿ: ಬಳ್ಳಾರಿ ಜಿಲ್ಲೆ ಸೇರಿದಂತೆ ರಾಜ್ಯಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆ
ಜಿಲ್ಲೆಯ ಪ್ರಸಿದ್ಧ ಮೈಲಾರಲಿಂಗ ಕ್ಷೇತ್ರಕ್ಕೆ ಭಕ್ತರು ಬರಬೇಡಿ ಎಂದು ಧರ್ಮಾಧಿಕಾರಿ ವೆಂಕಟಪ್ಪ ಒಡೆಯರ್
ಮನವಿ ಮಾಡಿದ್ದಾರೆ.

ಬಳ್ಳಾರಿ ಜಿಲ್ಲೆ ಹೂವಿನಹಡಗಲಿಯ ಇತಿಹಾಸ ಪ್ರಸಿದ್ಧ ಮೈಲಾರಲಿಂಗ ದೇವಸ್ಥಾನಕ್ಕೆ ಕರ್ನಾಟಕ ಮಾತ್ರವಲ್ಲದೆ ನೆರೆಯ ಆಂಧ್ರ, ಮಹಾರಾಷ್ಟçದಿಂದಲೂ ಸಾವಿರಾರು ಭಕ್ತರು ಬರುತ್ತಾರೆ. ಆದರೆ, ಕೊರೊನಾ ಹರಡುವುದನ್ನು ತಡೆಯಬೇಕಾದರೆ ಭಕ್ತರು ಕ್ಷೇತ್ರಕ್ಕೆ ಬರುವುದು ಬೇಡ. ಮನೆಯಲ್ಲೇ ಪ್ರಾರ್ಥನೆ ಮಾಡಿ ಎಂದು ವಿಡಿಯೋ ಸಂದೇಶದಲ್ಲಿ ತಿಳಿಸಿದ್ದಾರೆ.
ಮನೆಯಲ್ಲೇ ಮೈಲಾರೇಶ್ವರನ ಪ್ರಾರ್ಥನೆ ಮಾಡಿ, ಕೊರೊನಾ ನಿಯಂತ್ರಣಕ್ಕೆ ಬಂದ ನಂತರ ಕ್ಷೇತ್ರಕ್ಕೆ ಬನ್ನಿ ಎಂದು
ಮೈಲಾರಲಿಂಗ ದೇಗುಲದ ಧರ್ಮದರ್ಶಿ ವೆಂಕಟಪ್ಪ ಒಡೆಯರ್ ಭಕ್ತರಲ್ಲಿ ಮನವಿ ಮಾಡಿಕೊಂಡಿದ್ದಾರೆ.








