ಇನ್ಮುಂದೆ ರಾಜ್ಯದಲ್ಲಿ ನೈಟ್ ಕರ್ಫ್ಯೂ ಇರಲ್ಲ Corona saaksha tv
ಬೆಂಗಳೂರು : ಕೊರೊನಾ ಸೋಂಕು ಹರಡದಂತೆ ರಾಜ್ಯದಾದ್ಯಂತ ವಿಧಿಸಲಾಗಿದ್ದ ನೈಟ್ ಕರ್ಫ್ಯೂವನ್ನು ಸರ್ಕಾರ ಹಿಂಪಡೆದಿದೆ.
ಕೋವಿಡ್ ಎರಡನೇ ಅಲೆ ಹೆಚ್ಚಾದ ಹಿನ್ನೆಲೆಯಲ್ಲಿ ಜುಲೈ ತಿಂಗಳಿಂದ ರಾಜ್ಯದಾದ್ಯಂತ ನೈಟ್ ಕರ್ಫ್ಯೂ ಹೇರಲಾಗಿತ್ತು.
ಆದ್ರೆ ಇದೀಗ ರಾಜ್ಯದಾದ್ಯಂತ ಕೊರೊನಾ ಸೋಂಕಿನ ಪಾಸಿಟಿವಿಟಿ ಕಡಿಮೆಯಾದ ಪರಿಣಾಮ ನೈಟ್ ಕರ್ಫ್ಯೂವನ್ನು ಹಿಂಪಡೆಯಲಾಗಿದೆ.
ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ಆದೇಶ ಹೊರಡಿಸಿದ್ದಾರೆ.
ರಾಜ್ಯದಾದ್ಯಂತ ಜುಲೈ ತಿಂಗಳಿನಿಂದ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಹೇರಲಾಗಿತ್ತು.
ಆದ್ರೆ ಇದೀಗ ನೈಟ್ ಕರ್ಫ್ಯೂ ಅನ್ನು ವಾಪಸ್ ಪಡೆಯಲಾಗಿದೆ.
ಜೊತೆಗೆ ಕುದುರೆ ಓಟದ ಪಂದ್ಯಗಳನ್ನು ನಡೆಸಲು ಸರ್ಕಾರ ಅನುಮತಿಸಿದೆ.









