ಕೊರೊನಾ ಮೂರನೇ ಅಲೆಯಲ್ಲಿ ವಿದ್ಯಾರ್ಥಿಗಳೇ ಟಾರ್ಗೆಟ್..!
ಮಂಡ್ಯ : ಸಕ್ಕರೆ ನಾಡು ಮಂಡ್ಯದಲ್ಲಿ ಕೊರೊನಾ ಮೂರನೇ ಅಬ್ಬರ ಜೋರಾಗಿದ್ದು, ವಿದ್ಯಾರ್ಥಿಗಳಲ್ಲಿಯೇ ಹೆಚ್ಚಾಗಿ ಸೋಂಕು ಕಾಣಿಸಿಕೊಳ್ಳುತ್ತಿದೆ.
ಮದ್ದೂರು ಸರ್ಕಾರಿ ಪಿಯು ಕಾಲೇಜಿನ 25 ಹಾಗೂ ಸೋಮನಹಳ್ಳಿ GTDC ಕಾಲೇಜಿನ 18 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಇದರಿಂದ ಉಳಿದ ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಾಗಿದೆ.
ಸಾಮೂಹಿಕ ಕೋವಿಡ್ ಟೆಸ್ಟ್ ವೇಳೆ ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಸದ್ಯ ಎಲ್ಲರು ಆರೋಗ್ಯವಾಗಿದ್ದು, ಸೌಮ್ಯ ಸ್ವಾಭಾವದ ಕೋವಿಡ್ ಲಕ್ಷಣ ಹೊಂದಿದ್ದಾರೆ.
ಕೋವಿಡ್ ಸೆಂಟರ್ ನಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ಮುಂದುವರೆದಿದ್ದು, ವಿದ್ಯಾರ್ಥಿಗಳ ಮೇಲೆ ಆರೋಗ್ಯ ಸಿಬ್ಬಂದಿಗಳು ತೀವ್ರ ನಿಗಾವಹಿಸಿದ್ದಾರೆ.
ವಿದ್ಯಾರ್ಥಿಗಳಲ್ಲಿ ಕೊರೊನಾ ಕಾಣಿಸಿಕೊಂಡಿರುವುದರಿಂದ ಪೋಷಕರಲ್ಲಿ ಆತಂಕ ಹೆಚ್ಚಾಗಿದೆ.









