ನವದೆಹಲಿ : ಭಾರತದಲ್ಲಿ ಕೊರೊನಾ ಸ್ಫೋಟ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ 52,050 ಕೊರೋನಾ ಪ್ರಕರಣ ದಾಖಲಾಗಿದೆ. ಇದರೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 18,55,746ಕ್ಕೆ ಏರಿಕೆಯಾಗಿದೆ. ಇದೇ ಅವಧಿಯಲ್ಲಿ ಹೆಮ್ಮಾರಿ ಸೋಂಕಿಗೆ 803 ಮಂದಿ ಬಲಿಯಾಗಿದ್ದು, ಒಟ್ಟಾರೆ ಸಾವನ್ನಪ್ಪಿದ್ದವರ ಸಂಖ್ಯೆ ಕೂಡ 38938ಕ್ಕೆ ಏರಿಕೆಯಾಗಿದೆ.
ಇನ್ನು ದೇಶದ ಒಟ್ಟಾರೆ 18,55,746 ಮಂದಿ ಸೋಂಕಿತರ ಪೈಕಿ ಈವರೆಗೂ 12,30,510 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ದಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿನ್ನೂ 586298 ಮಂದಿ ಸೋಂಕಿನಿಂದ ಬಳಲುತ್ತಿದ್ದು, ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.