ನವದೆಹಲಿ : ಭಾರತದಲ್ಲಿ ಕೊರೊನಾ ಅಬ್ಬರ ಮುಂದುವರಿದಿದ್ದು, ದೇಶದ ಒಟ್ಟಾರೆ ಸೋಂಕಿತರ ಸಂಖ್ಯೆ 23,96,638 ಕ್ಕೆ ಏರಿಕೆಯಾಗಿದೆ. ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಕಳೆದ 24 ಗಂಟೆಯಲ್ಲಿ 66,999 ಮಂದಿಗೆ ಕೊರೊನಾ ಸೋಂಕು ತಗುಲಿರೋದು ದೃಢವಾಗಿದ್ದು, 942 ಸೋಂಕಿತರು ಮೃತಪಟ್ಟಿದ್ದಾರೆ.
ಇದರೊಂದಿಗೆ ಭಾರತದಲ್ಲಿ ವರದಿಯಾದ ಒಟ್ಟಾರೆ ಕೊರೊನಾ ಪ್ರಕರಣಗಳ ಸಂಖ್ಯೆ 23,96,638 ಕ್ಕೆ ಏರಿಕೆಯಾಗಿದೆ. ಇದ್ರಲ್ಲಿ ಸದ್ಯ 6,53,622 ಜನರು ಚಿಕಿತ್ಸೆ ಪಡೆಯುತ್ತಿದ್ದು, ಒಟ್ಟಾರೆ 16,95,982 ಜನರು ಸೋಂಕಿನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಒಂದು ದಿನದಲ್ಲಿ 56,383 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇಲ್ಲಿವರೆಗೂ ದೇಶದಲ್ಲಿ 47,033 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.








