ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಆಪ್ತ ಕಾರ್ಯದರ್ಶಿಗೆ ಕೊರೊನಾ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಮತ್ತೆ ಮೂರನೇ ಬಾರಿಗೆ ಹೋಂಕ್ವಾರಂಟೈನ್‍ಗೆ ಒಳಗಾಗುವ ಸಾಧ್ಯತೆ ಇದೆ.
ಆಪ್ತ ಕಾರ್ಯದರ್ಶಿಗೆ ಕೊರೊನಾ ಬಂದ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿರುವ ಸುಧಾಕರ್ ಅವರ ಕಚೇರಿ ಹಾಗೂ ಆಪ್ತ ಕಾರ್ಯದರ್ಶಿ ಕಚೇರಿಗಳನ್ನು ಸೀಲ್‍ಡೌನ್ ಮಾಡಿ ಸ್ಯಾನಿಟೈಸ್ ಮಾಡಲಾಗಿದೆ.
ಕೆಲ ದಿನಗಳ ಹಿಂದಷ್ಟೇ ಸುಧಾಕರ್ ಪತ್ನಿ, ತಂದೆಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಸುಧಾಕರ್ ಹೋಂಕ್ವಾರಂಟೈನ್‍ಗೆ ಒಳಗಾಗಿದ್ದರು. ಒಂದು ವಾರ ಹೋಂಕ್ವಾರಂಟೈನ್ ಬಳಿಕ ಕರ್ತವ್ಯಕ್ಕೆ ಹಾಜರಾಗಿದ್ದರು.
ಇದಕ್ಕೂ ಮೊದಲು ಕೋವಿಡ್ ಆಸ್ಪತ್ರೆಗಳಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹೋಂ ಕ್ವಾರಂಟೈನ್ ಆಗಿದ್ದರು. ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಚಿವ ಸುಧಾಕರ್ ನಿರಂತರ ಸಭೆ, ಆಸ್ಪತ್ರೆಗಳಿಗೆ ಭೇಟಿ ನೀಡುತ್ತಿದ್ದಾರೆ. ಇದರ ನಡುವೆಯೇ ಸುಧಾಕರ್ ಮತ್ತೆ ಹೋಂಕ್ವಾರಂಟೈನ್ ಆಗುತ್ತಿರುವುದು ಅವರ ಕೆಲಸಕ್ಕೆ ಅಡ್ಡಿ ಆಗುವ ಸಾಧ್ಯತೆ ಇದೆ.
ಟೆಲಿಪ್ರಾಂಪ್ಟರ್ ಇಲ್ಲದೆ ವಂದೇ ಮಾತರಂ ಹಾಡಿ ತೋರಿಸಲಿ -ಮೋದಿ ಮತ್ತು ಅಮಿತ್ ಶಾ ಸಂಪೂರ್ಣ ಗೀತೆ ಹಾಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದ ಪ್ರಿಯಾಂಕ್ ಖರ್ಗೆ
ಬೆಂಗಳೂರು: ವಂದೇ ಮಾತರಂ ಗೀತೆಯನ್ನು ರಾಜಕೀಯ ಅಸ್ತ್ರವನ್ನಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ನೇರ ಸವಾಲು ಹಾಕಿದ್ದಾರೆ. ಪ್ರಧಾನಿ ನರೇಂದ್ರ...








