ಹೊಸದಿಲ್ಲಿ, ಮೇ 22 : ಕಾಂಗ್ರೆಸ್ ಪಕ್ಷದ ನಾಯಕ ಸಂಜಯ್ ಝಾ ಅವರಿಗೆ ಕೊರೊನಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ಪಕ್ಷದ ವಕ್ತಾರ ಸಂಜಯ್ ಝಾ ತಮಗೆ ಕೊರೊನಾ ವೈರಸ್ ತಗುಲಿರುವ ಬಗ್ಗೆ ಸ್ಪಷ್ಟ ಪಡಿಸಿದರು.
ನನಗೆ ಕೊರೊನಾ ಪರೀಕ್ಷಾ ವರದಿಯಲ್ಲಿ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಆದರೆ ಯಾವ ರೋಗ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಹಾಗಾಗಿ ಮುಂದಿನ 10-12 ದಿನಗಳ ಕಾಲ ನಾನು ನನ್ನ ಮನೆಯಲ್ಲಿಯೇ ಸೆಲ್ಫ್ ಕ್ವಾರಂಟೈನ್ನಲ್ಲಿ ಇರಲಿದ್ದೇನೆ. ಕೊರೋನಾ ವಿಚಾರದಲ್ಲಿ ನಾವೆಲ್ಲರೂ
ಅಸಹಾಯಕರಾಗಿದ್ದು, ಈ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವ ಬಗ್ಗೆ ಅಸಡ್ಡೆ ಮಾಡಬಾರದು. ಎಲ್ಲರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಎಂದು ಸಂಜಯ್ ಝಾ ಟ್ವೀಟ್ ಮೂಲಕ ಎಲ್ಲರಿಗೂ ಮನವಿ ಮಾಡಿದ್ದಾರೆ.
ಸಂಜಯ್ ಝಾ ಅವರಿಗೆ ಕೊರೊನಾ ಸೋಂಕು ತಗುಲಿರುವುದು ತಿಳಿಯುತ್ತಿದ್ದಂತೆ ಮಧ್ಯಪ್ರದೇಶದ ಬಿಜೆಪಿ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಹಾಗೂ ಶಿವಸೇನಾ ನಾಯಕಿ ಪ್ರಿಯಾಂಕಾ ಚತುರ್ವೇದಿ ನಿಮ್ಮ ಆರೋಗ್ಯದ ಕುರಿತು ಕಾಳಜಿ ವಹಿಸಿ, ಬೇಗ ಗುಣಮುಖರಾಗಿ ಎಂದು ಟ್ವೀಟ್ ಮಾಡಿ ಹಾರೈಸಿದ್ದಾರೆ.
ಮೋದಿ ಎಂದರೆ ಭಯವೇ ನಾವು ಕೇಜ್ರಿವಾಲ್ ಸೈನಿಕರು ಸಮೋಸಾ ಬೆಲೆ ಇಳಿಸುವುದಲ್ಲ ನಮ್ಮ ಗುರಿ ರಾಘವ್ ಚಡ್ಡಾಗೆ ಆಪ್ ತಿರುಗೇಟು
ಆಮ್ ಆದ್ಮಿ ಪಕ್ಷದಲ್ಲಿ ಆಂತರಿಕ ಭಿನ್ನಮತ ಸ್ಫೋಟಗೊಂಡಿದ್ದು ನಾಯಕರ ನಡುವಿನ ವಾಕ್ಸಮರ ತಾರಕಕ್ಕೇರಿದೆ. ರಾಜ್ಯಸಭೆಯ ಎಎಪಿ ಉಪನಾಯಕ ಸ್ಥಾನದಿಂದ ಯುವ ನಾಯಕ ರಾಘವ್ ಚಡ್ಡಾ ಅವರನ್ನು ದಿಢೀರನೆ...








