ದೊಡ್ಡಗೌಡರಿಗೆ ಕೊರೊನಾ : ಸಿದ್ದರಾಮಯ್ಯ ಟ್ವೀಟ್
ನವದೆಹಲಿ : ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡ ಮತ್ತು ಅವರ ಪತ್ನಿ ಚನ್ನಮ್ಮನವರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಮನೆಯಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ದೇವೇಗೌಡ ಅವರನ್ನು ಮಣಿಪಾಲ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಇನ್ನೂ ದೇಚವೇಗೌಡರ ಆರೋಗ್ಯ ಸ್ಥಿರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಈ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಮತ್ತು ಅವರ ಪತ್ನಿ ಚನ್ನಮ್ಮನವರಿಗೆ ಕೊರೊನಾ ಸೋಂಕು ತಗುಲಿರುವ ಸುದ್ದಿ ತಿಳಿದು ಬೇಸರವಾಯಿತು.
ಇಬ್ಬರೂ ಆದಷ್ಟು ಬೇಗ ಸೋಂಕಿನಿಂದ ಗುಣಮುಖರಾಗಲಿ ಎಂದು ಹಾರೈಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
