ಬೆಂಗಳೂರು: ಆಪ್ತ ಸಹಾಯಕನಿಗೆ ಕೊರೊನಾ ಪಾಸಿಟಿವ್ ಬಂದರೂ ತಾವು ಹೋಂ ಕ್ವಾರಂಟೈನ್ ಆಗುವುದಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಸಚಿವ ಸುಧಾಕರ್ ಅವರ ಆಪ್ತ ಸಹಾಯಕನಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿರುವ ಸುಧಾಕರ್ ಅವರ ಕಚೇರಿ ಹಾಗೂ ಆಪ್ತ ಕಾರ್ಯದರ್ಶಿ ಕಚೇರಿಗಳನ್ನು ಸೀಲ್ಡೌನ್ ಮಾಡಿ ಸ್ಯಾನಿಟೈಸ್ ಮಾಡಲಾಗಿದೆ.
ಕೆಲ ದಿನಗಳ ಹಿಂದಷ್ಟೇ ಸುಧಾಕರ್ ಪತ್ನಿ, ತಂದೆಗೆ ಕೊರೊನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಸಚಿವ ಸುಧಾಕರ್ ಹೋಂಕ್ವಾರಂಟೈನ್ಗೆ ಒಳಗಾಗಿದ್ದರು. ಒಂದು ವಾರ ಹೋಂಕ್ವಾರಂಟೈನ್ ಬಳಿಕ ಕರ್ತವ್ಯಕ್ಕೆ ಹಾಜರಾಗಿದ್ದರು. ಇದಕ್ಕೂ ಮೊದಲು ಕೋವಿಡ್ ಆಸ್ಪತ್ರೆಗಳಿಗೆ ಭೇಟಿ ನೀಡಿದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಹೋಂ ಕ್ವಾರಂಟೈನ್ ಆಗಿದ್ದರು.
ಆಪ್ತ ಸಹಾಯಕನಿಗೆ ಕೊರೊನಾ ಬಂದಿದ್ದರೂ ನಾನು ಆತನ ಪ್ರಾಥಮಿಕ ಸಂಪರ್ಕ ಹೊಂದಿಲ್ಲ. ಹೀಗಾಗಿ ನಾನು ಮತ್ತೆ ಕ್ವಾರಂಟೈನ್ ಆಗುವ ಅಗತ್ಯವಿಲ್ಲ ಎಂದು ಸಚಿವ ಸುಧಾಕರ್ ಟ್ವಿಟರ್ನಲ್ಲಿ ಸ್ಪಷ್ಟಪಡಿಸಿದ್ದಾರೆ.