ಅಹಮದಾಬಾದ್: ಗುಜರಾತ್ ನ ಕಾಂಗ್ರೆಸ್ ಶಾಸಕ ಇಮ್ರಾನ್ ಖೇಡವಾಲ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಇವರು ಗುಜರಾತ್ ಮುಖ್ಯಮಂತ್ರಿ ವಿಜಯ್ ರೂಪಾನಿ ಅವರು ಮಂಗಳವಾರ ಏರ್ಪಡಿಸಿದ್ದ ಸಭೆಯಲ್ಲಿ ಭಾಗಿಯಾಗಿದ್ದರು. ಸದ್ಯ ಕೊರೊನಾ ಸೋಂಕಿತ ಶಾಸಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಉಪ ಪೌರಾಯುಕ್ತ ಓಂ ಪ್ರಕಾಶ್ ತಿಳಿಸಿದ್ದಾರೆ. ಸಭೆಯಲ್ಲಿ ಇಮ್ರಾನ್ ಖೇಡವಾಲ ಜೊತೆಗೆ ಅಹಮ್ಮದಬಾದ್ ಮಹಾನಗರದ ಇಬ್ಬರು ಕಾಂಗ್ರೆಸ್ ಶಾಸಕರು ಭಾಗವಹಿಸಿದ್ದರು. ಇವರು ಇಮ್ರಾನ್‌ಗೆ ತೀರ ಹತ್ತಿರದಲ್ಲಿ ಇದ್ದರು ಎನ್ನಲಾಗಿದೆ. ಈ ಸಭೆಯಲ್ಲಿ ಉಪಮುಖ್ಯಮಂತ್ರಿ ನಿತಿನ್ ಪಟೇಲ್ ಹಾಗೂ ಪ್ರದೀಪ್ ಸಿಮಗ್ ಜಡೇಜಾ ಕೂಡ ಭಾಗವಹಿಸಿದ್ದರು.
ಈ ಘಟನೆ ಬಳಿಕ ಈ ಶಾಸಕರು ಪ್ರತಿನಿಧಿಸುವ ಕ್ಷೇತ್ರಗಳಲ್ಲಿ ತೀವ್ರ ಕಟ್ಟೆಚ್ಚರವಹಿಸುವಂತೆ ಮುಖ್ಯಮಂತ್ರಿ ರೂಪಾನಿ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.








