Corona Update : 1,20,529 ಮಂದಿಗೆ ಸೋಂಕು, 1,97,894 ಜನರು ಡಿಸ್ಚಾರ್ಜ್
ನವದೆಹಲಿ : ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 1,20,529 ಜನರಲ್ಲಿ ಹೆಮ್ಮಾರಿ ಕೊರೊನಾ ಸೋಂಕು ಪತ್ತೆಯಾಗಿದೆ.
1,97,894 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 1,20,529 ಜನರಲ್ಲಿ ಕೊರೊನಾ ವೈರಸ್ ಪತ್ತೆಯಾಗಿದ್ದು, 3,380 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2,86,94,879ಕ್ಕೆ ಸೋಂಕಿಗೆ ಬಲಿಯಾದವರ ಸಂಖ್ಯೆ 3,44,082ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 15,55,248 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 2,67,95,549 ಸೋಂಕಿತರು ಗುಣಮುಖರಾಗಿದ್ದಾರೆ.
ಕಳೆದ 24 ಗಂಟೆಯಲ್ಲಿ 1,97,894 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ. ದೇಶದಲ್ಲಿ ಈವರೆಗೆ 22,78,60,317 ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ.










