Corona UPDATE : ರಾಜ್ಯದಲ್ಲಿ 18324 ಮಂದಿಗೆ ಸೋಂಕು, 514 ಬಲಿ
ಬೆಂಗಳೂರು : ರಾಜ್ಯದಲ್ಲಿ ಇಂದು 18324 ಹೊಸ ಕೊರೊನಾ ವೈರಸ್ ಕೇಸ್ ಗಳು ಪತ್ತೆಯಾಗಿವೆ.
ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಕಡಿಮೆಯಾಗುತ್ತಿದ್ದರೂ ಸಾವಿನ ಸಂಖ್ಯೆಯಲ್ಲಿ ಮಾತ್ರ ಯಾವುದೇ ವ್ಯತ್ಯಾಸ ಕಾಣುತ್ತಿಲ್ಲ.
ಪ್ರತಿ ದಿನ ರಾಜ್ಯದಲ್ಲಿ ನೂರಾರು ಮಂದಿ ಹೆಮ್ಮಾರಿ ವೈರಸ್ ಗೆ ಪ್ರಾಣ ಕಳೆದುಕೊಳ್ಳುತ್ತಲೇ ಇದ್ದಾರೆ. ಇಂದು ರಾಜ್ಯದಲ್ಲಿ ಬರೋಬ್ಬರಿ 514 ಮಂದಿ ಹೆಮ್ಮಾರಿಗೆ ಬಲಿಯಾಗಿದ್ದಾರೆ.
24036 ಮಂದಿ ಕೊರೊನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.
ಇನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇವತ್ತು 3533 ಮಂದಿಗೆ ಸೋಂಕು ದೃಢಪಟ್ಟಿದೆ. 347 ಮಂದಿ ಮಹಾಮಾರಿಗೆ ಜೀವ ಬಿಟ್ಟಿದ್ದಾರೆ. 7678 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆ.