ಕೊರೊನಾ ಅಪ್ ಡೇಟ್ : ಕಳೆದ 24 ಗಂಟೇಲಿ 22,272 ಕೇಸ್ ಪತ್ತೆ
ನವದೆಹಲಿ : ಭಾರತದಲ್ಲಿ ನಿನ್ನೆ ಒಂದೇ ದಿನದಲ್ಲಿ 22,272 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 1,01,69,118ಕ್ಕೆ ಏರಿಕೆಯಾಗಿದೆ..
ಕೇಂದ್ರ ಆರೋಗ್ಯ ಸಚಿವಾಲಯ ಈ ಕುರಿತು ಮಾಹಿತಿ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಗಳಲ್ಲಿ 22,272 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಇದೇ ಅವಧಿಯಲ್ಲಿ ದೇಶಾದ್ಯಂತ 251 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಇದರೊಂದಿಗೆ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,01,69,118ಕ್ಕೆ ಸೋಂಕಿಗೆ ಬಲಿಯಾದವರ ಸಂಖ್ಯೆ 1,47,343ಕ್ಕೆ ಏರಿಕೆಯಾಗಿದೆ.
ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯಕ್ಕೆ ರಾಹುಲ್ ಯಾಕಿಲ್ಲ..?
ಇನ್ನು ನಿನ್ನೆ ದೇಶದಲ್ಲಿ 22,274 ಮಂದಿ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಆ ಮೂಲಕ ದೇಶದಲ್ಲಿ ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 97,40,108ಕ್ಕೆ ಏರಿಕೆಯಾಗಿದೆ. ಇನ್ನು ದೇಶದಲ್ಲಿನ್ನೂ 2,81,667 ಸಕ್ರಿಯ ಪ್ರಕರಣಗಳಿವೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









