ಕೊರೊನಾ Corona ಅಪ್ ಡೇಟ್ : ಒಂದೇ ದಿನ 3.20 ಲಕ್ಷ ಸೋಂಕಿತರು ಡಿಸ್ಚಾರ್ಜ್
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಜೊತೆ ಜೊತೆಗೆ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವ ಸಂಖ್ಯೆಯೂ ಗಣನೀಯ ಪ್ರಮಾಣದಲ್ಲಿ ಏರಿಕೆ ಆಗುತ್ತಿದೆ.
ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ, ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 3,57,229 ಕೋವಿಡ್ ಕೇಸ್‍ಗಳು ಪತ್ತೆಯಾಗಿದ್ದರೇ ಇದೇ ಅವಧಿಯಲ್ಲಿ 3,20,289 ಮಂದಿ ಸೋಂಕಿನಿಂದ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ನಿನ್ನೆ 3,57,229 ಮಂದಿಗೆ ಸೋಂಕು ದೃಢಪಟ್ಟ ಹಿನ್ನೆಲೆ ಭಾರತದಲ್ಲಿನ ಒಟ್ಟು ಸೋಂಕಿತರ ಸಂಖ್ಯೆ 2 ಕೋಟಿ ( 2,02,82,833) ಗಡಿ ದಾಟಿದೆ.
ಸೋಮವಾರ ಒಂದೇ ದಿನದಲ್ಲಿ 3,449 ಮಂದಿ ವೈರಸ್ ಗೆ ಬಲಿಯಾಗಿದ್ದು, ದೇಶದಲ್ಲಿ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 2,22,408ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಪ್ರಸ್ತುತ 34,47,133 ಪ್ರಕರಣಗಳು ಸಕ್ರಿಯವಾಗಿದೆ.










