ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ತಗ್ಗಿದ್ದು, ಇಂದು ಇಂದು ಹೊಸದಾಗಿ 830 ಜನರಿಗೆ ಕೊರೊನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9,02,240ಕ್ಕೆ ಏರಿಕೆಯಾಗಿದೆ.
ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ಇಂದು 830 ಹೊಸ ಕೊರೊನಾ ಕೇಸ್ ಗಳು ಪತ್ತೆಯಾಗಿದ್ದರೇ 10 ಮಂದಿ ಸೋಂಕಿಗೆ ಕೊನೆಯುಸಿರೆಳೆದಿದ್ದಾರೆ.
ಬೆಂಗಳೂರು ನಗರದಲ್ಲಿ 1,576 ಸೋಂಕಿತರು ಸೇರಿದಂತೆ ರಾಜ್ಯಾದ್ಯಂತ ಇಂದು 2,164 ಮಂದಿ ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ರಾಜ್ಯಾದ್ಯಂತ 16,065 ಸಕ್ರೀಯ ಸೋಂಕಿತರಿದ್ದಾರೆ.
ಇಂದು ಬೆಂಗಳೂರು ನಗರದಲ್ಲಿ 5 ಸೋಂಕಿತರು ಸೇರಿದಂತೆ ರಾಜ್ಯಾಧ್ಯಂತ 10 ಜನರು ಕೊರೊನಾಗೆ ಬಲಿಯಾಗಿದ್ದಾರೆ. ಇದರೊಂದಿಗೆ ಕಿಲ್ಲರ್ ಕೊರೊನಾಗೆ ಬಲಿಯಾದವರ ಸಂಖ್ಯೆ 11,954ಕ್ಕೆ ಏರಿಕೆಯಾಗಿದೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel









