ಕೊರೊನಾ ಅಪ್ ಡೇಟ್.. ವೀಕೆಂಡ್ ಕರ್ಫ್ಯೂ ಹೇಗಿತ್ತು.. ಓದಿ ಟಾಪ್ 5 ನ್ಯೂಸ್
01. ರಾಜ್ಯದಲ್ಲಿ ಇಂದು ಕೂಡ ಕೊರೊನಾ ಸೋಂಕಿನ ಅಬ್ಬರ ಮುಂದುವರೆದಿದೆ. ಇಂದು ರಾಜ್ಯದಾದ್ಯಂತ 8906 ಕೇಸ್ ಗಳು ಪತ್ತೆಯಾಗಿವೆ. ನಾಲ್ಕು ಮಂದಿ ಹೆಮ್ಮಾರಿ ಬಲಿಯಾಗಿದ್ದಾರೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇಕಡಾ 5.42ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ 7113 ಕೇಸ್ ಗಳು ಪತ್ತೆಯಾಗಿವೆ.
02. ಕೊರೊನಾ ಮೂರನೇ ಅಲೆ ದೇಶದಲ್ಲಿ ಈಗಾಗಲೇ ಆರ್ಭಟಿಸಲು ಶುರು ಮಾಡಿದೆ. ಈ ಮಧ್ಯೆ ಆಘಾತಕಾರಿ ಮಾಹಿತಿಯೊಂದು ಹೊರಬಿದ್ದಿದ್ದು, ಕೊರೊನಾ ವೈರಸ್ ಗೆ ಭಾರತದಲ್ಲಿ 32 ಲಕ್ಷ ಮಂದಿ ಬಲಿಯಾಗಿದ್ದಾರೆ ಎಂದು ಅಧ್ಯಯನವೊಂದು ಪ್ರಕಟಿಸಿದೆ. ಕೇಂದ್ರ ಆರೋಗ್ಯ ಇಲಾಖೆಯ ಮಾಹಿತಿ ಪ್ರಕಾರ ದೇಶದಲ್ಲಿ ಈವರೆಗೆ 4,83,178 ಜನರು ಕೋವಿಡ್ನಿಂದ ಸಾವನ್ನಪ್ಪಿದ್ದಾರೆ. ಆದ್ರೆ ‘ಸೈನ್ಸ್’ ಜರ್ನಲ್‌ನಲ್ಲಿ ಪ್ರಕಟವಾದ ಹೊಸ ಅಧ್ಯಯನವು ಸುಮಾರು 3.2 ಮಿಲಿಯನ್ ಸೋಂಕಿತರು ಭಾರತದಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಹೇಳಿದೆ.
03. ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ, ಪಂಜಾಬ್, ಗೋವಾ ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ ವಾಗಿದೆ. 5 ರಾಜ್ಯಗಳಲ್ಲಿ 7 ಹಂತದಲ್ಲಿ ಚುನಾವಣೆ ನಡೆಯಲಿದೆ. ಫೆಬ್ರವರಿ 14ರಂದು ಪಂಜಾಬ್, ಗೋವಾ, ಉತ್ತರಾಖಂಡ್‌ನಲ್ಲಿ ಮತದಾನ ನಡೆಯಲಿದೆ. ಉತ್ತರ ಪ್ರದೇಶದ 403 ಕ್ಷೇತ್ರಗಳಿಗೆ 7ಹಂತದಲ್ಲಿ ಮತದಾನ ನಡೆಯಲಿದೆ. ಮಣಿಪುರದ 60 ಕ್ಷೇತ್ರಗಳಿಗೆ 2 ಹಂತದಲ್ಲಿ ಮತದಾನ ನಡೆಯಲಿದೆ. ಫೆಬ್ರವರಿ 27ರಂದು ಮೊದಲ ಹಂತದ ಮತದಾನ, ಮಾರ್ಚ್ 3ರಂದು 2ನೇ ಹಂತದ ಮತದಾನ ನಡೆಯಲಿದ್ದು, ಮಾರ್ಚ್ 10ರಂದು ಚುನಾವಣಾ ಫಲಿತಾಂಶ ಪ್ರಕಟ ಆಗಲಿದೆ.
04. ಯಶ್ ಜನ್ಮದಿನದ ಪ್ರಯುಕ್ತ ‘ಕೆಜಿಎಫ್: ಚಾಪ್ಟರ್ 2’ ಸಿನಿಮಾದಿಂದ ಹೊಸ ಪೋಸ್ಟರ್ ಬಿಡುಗಡೆ ಆಗಿದೆ. ಬೆಳಗ್ಗೆ 9 ಗಂಟೆಗೆ ಪೋಸ್ಟರ್ ರಿಲೀಸ್ ಮಾಡುವುದಾಗಿ ಚಿತ್ರತಂಡ ಒಂದು ದಿನ ಮುಂಚಿತವಾಗಿ ಘೋಷಿಸಿತ್ತು. ಅದರಂತೆ ಹೊಂಬಾಳೆ ಫಿಲ್ಮ್ಸ್ ಸಂಸ್ಥೆ ಹೊಸ ಪೋಸ್ಟರ್ ರಿಲೀಸ್ ಮಾಡಿದೆ. ಅಲ್ಲದೆ #KGF2onApr14 ಎಂಬ ಹ್ಯಾಶ್ ಟ್ಯಾಗ್ ಬಳಸಿದೆ. ಆ ಮೂಲಕ ರಿಲೀಸ್ ದಿನಾಂಕದಲ್ಲಿ ಸದ್ಯಕ್ಕಂತೂ ಯಾವುದೇ ಬದಲಾವಣೆ ಇಲ್ಲ ಎಂಬುದನ್ನು ಖಚಿತಪಡಿಸಿದೆ.
05. ದಕ್ಷಿಣ ಆಫ್ರಿಕಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಕೆಲ ಬದಲಾವಣೆಗಳು ಆಗುವ ಸಾಧ್ಯತೆಗಳಿವೆ. ಕೇಪ್ ಟೌನ್ ನಲ್ಲಿ ನಡೆಯಲಿರುವ ಈ ಪಂದ್ಯಕ್ಕಾಗಿ ಟೀಂ ಇಂಡಿಯಾ ಸಿದ್ಧತೆ ಮಾಡಿಕೊಂಡಿದೆ. ಗಾಯದ ಸಮಸ್ಯೆಯಿಂದ 2ನೇ ಟೆಸ್ಟ್ ನಿಂದ ದೂರ ಇದ್ದ ವಿರಾಟ್ ಮತ್ತೆ ತಂಡಕ್ಕೆ ವಾಪಸ್ ಆಗಲಿದ್ದಾರೆ. ಸಿರಾಜ್ ಬದಲು ಉಮೇಶ್ ಯಾದವ್ ಕಣಕ್ಕಿಳಿಯಲಿದ್ದಾರೆ. ವೀಕೆಟ್ ಕೀಪರ್ ಪಂತ್ ಸ್ಥಾನಕ್ಕೆ ಸಹಾ ಆಯ್ಕೆ ಆಗುವ ಸಾಧ್ಯತೆಗಳಿವೆ.









