ದೇಶದಲ್ಲಿ ಕೊರೊನಾ 2ನೇ ಅಲೆ ಅಬ್ಬರ , ಒಂದೇ ದಿನ 59,118 ಪಾಸಿಟಿವ್ ಕೇಸ್ ಗಳು ಪತ್ತೆ..!
ನವದೆಹಲಿ: ದೇಶದಲ್ಲಿ ಕೊರೊನಾ 2ನೇ ಅಲೆ ಅಪ್ಪಳಿಸಿದ್ದು, ಮತ್ತೆ ದೇಶದಲ್ಲಿ 50 ಸಾವಿರಕ್ಕೂ ಅಧಿಕ ಕೇಸ್ ಗಳು ದಿನಂಪ್ರತಿ ಪತ್ತೆಯಾಗುತ್ತಿರೋದು ಆತಂಕಕ್ಕೆ ಕಾರಣವಾಗಿದೆ.
3 ತಿಂಗಳಿನಿಂದ ಗಣನೀಯವಾಗಿ ಇಳಿಕೆ ಕಂಡಿದ್ದ ಕೇಸ್ ಗಳು ಇದೀಗ ಮತ್ತೆ ದಿನೇ ದಿನೇ ಏರಿಕೆಯಾಗ್ತಲೇ ಇದೆ. ಕಳೆದ 24 ಗಂಟೆಯಲ್ಲಿ 59,118 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1,18,46,652ಕ್ಕೆ ಏರಿಕೆಯಾಗಿದೆ.
ಇನ್ನೂಒಂದೇ ದಿನ ದೇಶದಲ್ಲಿ 257 ಜನರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 1,60,949ಕ್ಕೆ ಏರಿಕೆಯಾಗಿದೆ.
ಇನ್ನು ದೇಶದಲ್ಲಿ 4,21,066 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು 1,12,64,637 ಸೋಂಕಿತರು ಗುಣಮುಖರಾಗಿದ್ದಾರೆ. ಕಳೆದ 24 ಗಂಟೆಯಲ್ಲಿ 32,987 ಸೋಂಕಿತರು ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದಾರೆ.
ಬಹುಬಾಷಾ ನಟ ಪ್ರಕಾಶ್ ರಾಜ್ ಅವರಿಗೆ 56 ನೇ ಹುಟ್ಟುಹಬ್ಬದ ಸಂಭ್ರಮ..!
ಕೊಳೆಗೇರಿ ಪ್ರದೇಶಗಳಲ್ಲಿ ಕೋವಿಡ್ ಲಸಿಕೆಗೆ ಆಸ್ಯತೆಯ ಬಗ್ಗೆ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್..!