ವಿಜಯಪುರ: ಕೊರೊನಾ ವೈರಸ್ ಸೋಂಕಿಗೆ ತುತ್ತಾಗಿರುವ ಸಿಎಂ ಬಿ.ಎಸ್ ಯಡಿಯೂರಪ್ಪ ಶೀಘ್ರ ಗುಣಮುಖರಾಗಲಿ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಪ್ರಾರ್ಥಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಯತ್ನಾಳ್, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೊನಾ ಸೋಂಕು ತಗುಲಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರು ಶೀಘ್ರ ಗುಣಮುಖರಾಗಿ ಮತ್ತೆ ಸೇವೆಗೆ ಸಿದ್ಧವಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.
ಕೊರೊನಾ ಪಾಸಿಟಿವ್ ಬಂದ ಬಗ್ಗೆ ಸಿಎಂ ಬಿಎಸ್ ವೈ ಟ್ವಿಟರ್ ಮೂಲಕ ತಿಳಿಸಿದ್ದು, ಮಣಿಪಾಲ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅವರಿಗೆ ಯಾವುದೇ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿಲ್ಲ. ಆದರೆ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಸಿಎಂ ಕೋರಿದ್ದಾರೆ.