“ಎಲೆಕ್ಷನ್ ನಿಂದ ಕೊರೊನಾ ಹೆಚ್ಚಾಗಿಲ್ಲ, ಜನರೇ ಸೋಂಕಿನ ವಿರುದ್ಧ ಹೋರಾಡಿ” corona
ಬಳ್ಳಾರಿ : ಬೈ ಎಲೆಕ್ಷನ್ ನಿಂದಾಗಿ ಕೊರೊನಾ ಸೋಂಕು ಹೆಚ್ಚಳವಾಗಿದೆ ಎಂಬೋದು ಸುಳ್ಳು, ಜನರೇ ಕೊರೊನಾ ವಿರುದ್ಧ ಹೋರಾಡಬೇಕು ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಐದು ವಿಧಾನಸಭಾ ಚುನಾವಣೆ ಮತ್ತು ರಾಜ್ಯದ ಉಪಚುನಾವಣೆಗಳಿಂದ ದೇಶದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದೆ ಎಂಬುದು ಸುಳ್ಳು.
ಕೊರೊನಾ ಹೆಚ್ಚಳಕ್ಕೆ ನೂರಾರು ಕಾರಣಗಳಿದ್ದು, ಜನರೇ ಕೊರೊನಾ ವಿರುದ್ಧ ಹೋರಾಡಬೇಕಿದೆ ಎಂದು ಮನವಿ ಮಾಡಿಕೊಂಡರು..
ರಾಜ್ಯದಲ್ಲಿ ಆಕ್ಸಿಜನ್ ಹಂಚಿಕೆಯ ಜವಾಬ್ದಾರಿಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನನಗೆ ನೀಡಿದ್ದಾರೆ. ರಾಜ್ಯಕ್ಕೆ ಪ್ರತಿ ನಿತ್ಯ 1,750 ಟನ್ ಆಕ್ಸಿಜನ್ ಅಗತ್ಯವಿದೆ.
ಸದ್ಯ ನಮ್ಮಲ್ಲಿ 1,200ಕ್ಕೂ ಹೆಚ್ಚು ಟನ್ ಆಕ್ಸಿಜನ್ ಲಭ್ಯ ಇದೆ. ಹೆಚ್ವಳ ಮಾಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.