Corona virus | ದೇಶದಲ್ಲಿಂದು 4 ಸಾವಿರ ಕೊರೊನಾ ಕೇಸ್ ಪತ್ತೆ
ನವದೆಹಲಿ : ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ ನಾಲ್ಕು ಸಾವಿರಕ್ಕೂ ಹೆಚ್ಚು ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ಕೇಂದ್ರ ಆರೋಗ್ಯ ಸಚಿವಾಲಯದ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಭಾರತದಲ್ಲಿ 4,858 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 18 ಮಂದಿ ಸಾವನ್ನಪ್ಪಿದ್ದಾರೆ.
ಕೇರಳದಲ್ಲಿ ಎಂಟು ಮಂದಿ ಬಲಿಯಾಗಿದ್ದಾರೆ.
ಇದರೊಂದಿಗೆ 48,027 ಸಕ್ರಿಯ ಪ್ರಕರಣಗಳಿವೆ.
ನಿನ್ನೆ 4,735 ಮಂದಿ ಕೊರೊನಾ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ.
ದೇಶದಲ್ಲಿ ಚೇತರಿಕೆಯ ಪ್ರಮಾಣ ಶೇಕಡಾ 98.71 ರಷ್ಟಿದೆ.