ರಾಜ್ಯದಲ್ಲಿ ಕೊರೊನಾ ಹೆಚ್ಚಳ : ಮತ್ತೆ ಲಾಕ್ ಡೌನ್..?
ಬೆಂಗಳೂರು : ನೆರೆಯ ರಾಜ್ಯಗಳಲ್ಲಿ ಕೊರೊನಾ ಸೋಂಕು ಸ್ಫೋಟವಾಗುತ್ತಿರುವುದು ಹಾಗೂ ರಾಜ್ಯದಲ್ಲಿ ಕೊರೊನಾ ಕೇಸ್ ಗಳು ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.
ರಾಜ್ಯದಲ್ಲಿ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ತಾಂತ್ರಿಕ ಸಲಹಾ ಸಮಿತಿಯಿಂದ ಟಫ್ ರೂಲ್ಸ್ ಜಾರಿಗೆ ಶಿಫಾರಸ್ಸು ಮಾಡಿದೆ.
ಕೋವಿಡ್ ಸೊಂಕು ಹೆಚ್ಚಳ ಹಿನ್ನೆಲೆ ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಬೊಮ್ಮಾಯಿ ಸಭೆ ನಡೆಸಿದ್ದಾರೆ.
ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಬೊಮ್ಮಾಯಿ ನೇತೃತ್ವದಲ್ಲಿ ಸಭೆಯಲ್ಲಿ ಸಚಿವರಾದ ಡಾ.ಅಶ್ವಥ್ ನಾರಾಯಣ್, ಡಾ.ಕೆ ಸುಧಾಕರ್,
ಸಿಎಸ್ ರವಿಕುಮಾರ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್ ಸೇರಿದಂತೆ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಆರೋಗ್ಯ ಇಲಾಖೆಯ ಅಧಿಕಾರಿಗಳು, ಪೆÇಲೀಸ್ ಅಧಿಕಾರಿಗಳು ಭಾಗಿಯಾಗಿದ್ದರು.
ಈ ಸಭೆಯಲ್ಲಿ ಮುಖ್ಯವಾಗಿ ನೈಟ್ ಕಪ್ರ್ಯೂ ಅವಧಿ ವಿಸ್ತರಿಸುವ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡಿದ್ದು, ಸಂಜೆ 6 ಗಂಟೆಯಿಂದ ಬೆಳಿಗ್ಗೆ 6 ಗಂಟೆಗೆ ನೈಟ್ ಕಪ್ರ್ಯೂಗೆ ಶಿಫಾರಸು ಮಾಡಿದೆ. ಜೊತೆಗೆ ವಿಕೇಂಡ್ ಲಾಕ್ ಡೌನ್ ಜಾರಿ ಮಾಡುವ ಬಗ್ಗೆಯೂ ಚರ್ಚೆ ನಡೆಯುತ್ತಿದೆ.









