ಕೆಲ ಹೊತ್ತಿನಲ್ಲೇ ಸಿಎಂ ಲಾಕ್ ಡೌನ್ ಘೋಷಿಸಲಿದ್ದಾರೆ : ಅಶ್ವಥ್ ನಾರಾಯಣ್ ಸುಳಿವು ashwath-narayan
ಬೆಂಗಳೂರು : ರಾಜ್ಯದಲ್ಲಿ ಲಾಕ್ ಡೌನ್ ಬಗ್ಗೆ ಭಾರಿ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಡಿಸಿಎಂ ಅಶ್ವಥ್ ನಾರಾಯಣ್, ಇನ್ನು ಸ್ವಲ್ಪ ಹೊತ್ತಿನಲ್ಲೇ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಲಾಕ್ ಡೌನ್ ಘೋಷಣೆ ಮಾಡಲಿದ್ದಾರೆ ಎಂದು ಸುಳಿವು ನೀಡಿದ್ದಾರೆ.
ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಲಾಕ್ ಡೌನ್ ಗೆ ಚಿಂತನೆ ನಡೆಸಿದೆ ಎಂದು ಹೇಳಲಾಗುತ್ತಿದೆ.
ಈ ಮಧ್ಯೆ ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿದ ಡಿಸಿಎಂ ಅಶ್ವಥ್ ನಾರಾಯಣ್, ಈ ಬಗ್ಗೆ ಕೆಲವೇ ಗಂಟೆಗಳಲ್ಲಿ ಸಿಎಂ ಬಿ.ಎಸ್.ಯಡಿಯೂರಪ್ಪ ಅಧಿಕೃತವಾಗಿ ಮಾಹಿತಿ ಕೊಡ್ತಾರೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿಗಳು ಎಲ್ಲರ ಅಭಿಪ್ರಾಯ ಸಂಗ್ರಹ ಮಾಡಿದ್ದಾರೆ. ತಜ್ಞರು, ಜನರ ಮನಸ್ಥಿತಿ ಅನುಗುಣವಾಗಿ ಸಿಎಂ ನಿರ್ಧಾರ ಮಾಡ್ತಾರೆ.
ಸಿಎಂ ಕೆಲವೇ ಗಂಟೆಗಳಲ್ಲಿ ಇದನ್ನ ಘೋಷಣೆ ಮಾಡ್ತಾರೆ ಎಂದು ಮಾಹಿತಿ ನೀಡಿದರು.










