ಬೆಂಗಳೂರು ಹೊರತುಪಡಿಸಿ ಉಳಿದೆಡೆ ಇಂದಿರಾ ಕ್ಯಾಂಟೀನ್ ಆರಂಭ lockdown
ಬೆಂಗಳೂರು : ಬೆಂಗಳೂರು ಹೊರತುಪಡಿಸಿ ಉಳಿದೆಲ್ಲ ನಗರಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಸರ್ಕಾರ ಆದೇಶ ಹೊರಡಿಸಿದೆ.
ಲಾಕ್ ಡೌನ್ ನಿಂದಾಗಿ ಕೂಲಿ ಕಾರ್ಮಿಕರು, ಬಡವರು ಸಾಕಷ್ಟು ಕಷ್ಟಗಳನ್ನು ಅನುಭವಿಸುತ್ತಿದ್ದು, ಈ ಬಗ್ಗೆ ಸರ್ಕಾರದ ವಿರುದ್ಧ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು.
ಇದೀಗ ಈ ಕುರಿತು ಎಚ್ಚೆತ್ತುಕೊಂಡಿರುವ ಸರ್ಕಾರ, ಬೆಂಗಳೂರು ಹೊರತುಪಡಿಸಿ ಉಳಿದೆಲ್ಲ ನಗರಗಳಲ್ಲಿ ಇಂದಿರಾ ಕ್ಯಾಂಟೀನ್ ತೆರೆಯಲು ಆದೇಶಿಸಿದೆ.
ಅಲ್ಲದೆ ಉಚಿತವಾಗಿ ಉಪಹಾರ, ಊಟ ಹಾಗೂ ರಾತ್ರಿ ನೀಡಲು ಸೂಚಿಸಿದೆ. ಮೇ 10ರಿಂದ 24ರ ವರೆಗೆ ಲಾಕ್ ಡೌನ್ ಜಾರಿಯಲ್ಲಿದೆ.

ಹೀಗಾಗಿ ಕೂಲಿ ಕಾರ್ಮಿಕರು, ವಲಸಿಗರು ಹಾಗೂ ದುರ್ಬಲ ವರ್ಗದವರಿಗೆ ಅನುಕೂಲವಾಗುವಂತೆ ಉಚಿತ ಉಪಹಾರ ಊಟವನ್ನು ನೀಡಲು ಇಂದಿರಾ ಕ್ಯಾಂಟೀನ್ ಆರಂಭಿಸಲು ಸರ್ಕಾರ ಆದೇಶಿಸಿದೆ.
ಮಾರ್ಗಸೂಚಿಗಳ ಅನ್ವಯ ಇಂದಿರಾ ಕ್ಯಾಂಟೀನ್ ಗಳಲ್ಲಿ ಊಟ ನೀಡಲು ತಿಳಿಸಿದೆ.
ನಗರಗಳ ಎಲ್ಲ ಇಂದಿರಾ ಕ್ಯಾಂಟೀನ್ ಗಳಲ್ಲಿ ಉಪಹಾರ, ಮಧ್ಯಾಹ್ನ ಊಟ, ರಾತ್ರಿ ಊಟವನ್ನು ಉಚಿತವಾಗಿ ನೀಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.









