ಕೊರೊನಾ ಚೈನ್ ಲಿಂಕ್ ತುಂಡರಿಸಲು ಲಾಕ್ ಡೌನ್ ಅನಿವಾರ್ಯ : ಸುರೇಶ್ ಕುಮಾರ್
ಚಾಮರಾಜನಗರ : ಕೊರೊನಾ ತಡೆಗೆ ರಾಜ್ಯದಲ್ಲಿ ಹೇರಿದ್ದ ಜನತಾ ಕಫ್ರ್ಯೂ ನಿರೀಕ್ಷಿತ ಫಲ ನೀಡಿಲ್ಲ.
ರಾಜ್ಯದಲ್ಲಿ ಕೊರೊನಾ ಚೈನ್ ಲಿಂಕ್ ತುಂಡರಿಸಲು ಲಾಕ್ ಡೌನ್ ಅನಿವಾರ್ಯ ಎಂದು ಸಚಿವ ಎಸ್. ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ.
ಚಾಮರಾಜನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಲಾಕ್ ಡೌನ್ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸುರೇಶ್ ಕುಮಾರ್, ಜನತಾ ಕಫ್ರ್ಯೂ ನಿಂದ ಸೋಂಕಿತರ ಸಂಖ್ಯೆ ಕಡಿಮೆಯಾಗಿಲ್ಲ.
ಹಾಗಾಗಿ, ಲಾಕ್ ಡೌನ್ ಜಾರಿಯಾಗಬೇಕೆಂದು ಎಲ್ಲರೂ ಹೇಳುತ್ತಿದ್ದಾರೆ. ಇಂದು ಸಂಜೆ ಸಿಎಂ ಸಭೆ ನಡೆಸಲಿದ್ದಾರೆ. ಇನ್ನು ಒಂದೆರೆಡು ದಿನಗಳಲ್ಲಿ ಸರ್ಕಾರ ಲಾಕ್ ಡೌನ್ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿದೆ ಎಂದರು.
ಇನ್ನು ಮುಖ್ಯವಾಗಿ ಕೊರೊನಾ ಕಂಟ್ರೋಲ್ ಗೆ ಲಾಕ್ ಡೌನ್ ಪರಿಹಾರವಾದರೂ ಆದರಿಂದ ಆಗುವ ಬಾಧಕಗಳನ್ನು ಚರ್ಚಿಸಬೇಕಿದೆ.
ದುಡಿಮೆ ನಂಬಿರುವವರ ಬಗ್ಗೆಯೂ ಯೋಚಿಸಬೇಕಿದೆ. ಬೇರೆ ಜಿಲ್ಲೆಗಳಲ್ಲಿ ಈಗ ಲಾಕ್ ಡೌನ್ ಮಾಡಲಾಗುತ್ತಿದೆ.
ನಮ್ಮ ಜಿಲ್ಲೆಯ ಸ್ಥಿತಿ, ಅಂಕಿ-ಸಂಖ್ಯೆಗಳನ್ನು ಸಿಎಂ ಅವರಿಗೆ ತಿಳಿಸುತ್ತೇನೆ ಎಂದರು.










