2ನೇ ಹಂತದ ಲಾಕ್ ಡೌನ್ ಬಳಿಕ ಆರ್ಥಿಕ ಪ್ಯಾಕೇಜ್ ಘೋಷಣೆ : ಆರ್.ಅಶೋಕ್
ಕಾರವಾರ : ಸದ್ಯ ರಾಜ್ಯದಲ್ಲಿ ಕೊರೊನಾ ಸ್ಫೋಟ ಮುಂದುವರೆದಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಲಾಕ್ ಡೌನ್ ವಿಸ್ತರಣೆ ಹಾಗೂ ಆರ್ಥಿಕ ಪ್ಯಾಕೇಜ್ ಬಗ್ಗೆ ಭಾರಿ ಚರ್ಚೆಗಳು ನಡೆಯುತ್ತಿವೆ.
ಈ ಬಗ್ಗೆ ಭಟ್ಕಳದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಪ್ರತಿಕ್ರಿಯೆ ನೀಡಿದ್ದು, ಎರಡನೇ ಹಂತದ ಲಾಕ್ ಡೌನ್ ಘೋಷಣೆ ಆಗುತ್ತಿದ್ದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ಯಾಕೇಜ್ ಘೋಷಣೆ ಮಾಡುತ್ತಾರೆ ಎಂದಿದ್ದಾರೆ.
ರಾಜ್ಯದಲ್ಲಿ ಲಾಕ್ ಡೌನ್ ಮುಂದುವರಿಸಿದ್ರೆ ಒಳ್ಳೆಯದು.
ಈಗಿನ ಪರಿಸ್ಥಿಯನ್ನು ನೋಡಿದ್ರೆ ಲಾಕ್ ಡೌನ್ ಮುಂದುವರಿಕೆ ಉತ್ತಮ. ಎರಡನೇ ಹಂತದ ಲಾಕ್ ಡೌನ್ ಘೋಷಣೆ ಆಗುತ್ತಿದ್ದಂತೆ ಮುಖ್ಯಮಂತ್ರಿ ಯಡಿಯೂರಪ್ಪನವರು ಪ್ಯಾಕೇಜ್ ಘೋಷಣೆ ಮಾಡುತ್ತಾರೆ. ಸದ್ಯ ಪರಿಸ್ಥಿತಿ ಅವಲೋಕಿಸಿ ಪ್ಯಾಕೇಜ್ ಘೋಷಣೆ ಮಾಡುತ್ತಾರೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಹಳ್ಳಿಗಳಲ್ಲಿ ಸೋಂಕು ಹೆಚ್ಚಾಗುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಪ್ರತಿ ಹಳ್ಳಿಗಳಿಗೂ ಅಧಿಕಾರಿಗಳ ತಂಡ ಕಳಿಸಿ ಸೋಂಕು ತಡೆಯಲು ಪ್ರಯತ್ನ ಮಾಡಲಾಗುತ್ತಿದೆ.
ಹಳ್ಳಿಗಳಲ್ಲಿ ಅತೀ ಹೆಚ್ಚು ಟೆಸ್ಟಿಂಗ್ ಮಾಡಿಸಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಹಳ್ಳಿಗಳಲ್ಲಿ ಹೋಂ ಐಸೋಲೇಷನ್ ಇದ್ದ ಸೋಂಕಿತರಿಗೆ ಸಾಂತ್ವನ ಹೇಳಿ ಧೈರ್ಯ ತುಂಬಲು ಈ ನಿಯಮ ಮಾಡಲಾಗಿದೆ ಎಂದು ತಿಳಿಸಿದರು.









