ಕೋವಿಡ್ ಸಭೆಗೆ ಕ್ಷಣಗಣನೆ : ಜನರಿಗೆ ಕಾದಿದ್ಯಾ ಶಾಕಿಂಗ್ ಸುದ್ದಿ..? corona virus
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿನ ಅಬ್ಬರ ಮುಂದುವರೆಯುವ ಸಾಧ್ಯತೆಗಳು ದಟ್ಟವಾಗುತ್ತಿವೆ.
ಈ ಹಿನ್ನೆಲೆಯಲ್ಲಿ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಕೋವಿಡ್ ಸಭೆ ಕರೆಯಲಾಗಿದ್ದು, ಟಫ್ ರೂಲ್ಸ್ ಜಾರಿಯಾಗುವ ಎಲ್ಲಾ ಸಾಧ್ಯತೆಗಳಿವೆ.
ಕೋವಿಡ್ ಸಭೆ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವ ಅಗತ್ಯವಿದೆ.
ವೀಕೆಂಡ್ ಕಫ್ರ್ಯೂ ಬಗ್ಗೆಯೂ ಸಂಜೆ ನಿರ್ಧಾರ ಕೈಗೊಳ್ಳಲಾಗುವುದು. ಮೂರನೇ ಅಲೆ ಆತಂಕ ಇರುವುದರಿಂದ ಸೋಂಕು ನಿಯಂತ್ರಣಕ್ಕೆ ಈಗಲೇ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ ಎಂದರು.
ಇನ್ನು ರಾಜ್ಯದಲ್ಲಿ ಕೊರೊನಾ ಸೋಂಕು ಏರಿಳಿತ ಮುಂದುವರೆದಿದೆ. ಅದರಲ್ಲೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಪ್ರಕರಣಗಳ ಸಂಖ್ಯೆ 400ರ ಗಡಿಯಲ್ಲೇ ನಿಂತಿದ್ದು, ಬಿಬಿಎಂಪಿಗೆ ತಲೆ ಬಿಸಿ ಶುರುವಾಗಿದೆ.
ಈ ಹಿನ್ನೆಲೆಯಲ್ಲಿ ಕಟ್ಟುನಿಟ್ಟಿನ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ಹೇಳಲಾಗುತ್ತಿದೆ.









