ನವದೆಹಲಿ : ದೇಶದಲ್ಲಿ ಕೊರೊನಾ ಸ್ಫೋಟ ಮುಂದುವರಿಯುತ್ತಿರುವ ಹಿನ್ನೆಲೆ ಕರ್ನಾಟಕ ಸೇರಿ ಸೋಂಕು ಹೆಚ್ಚಿರುವ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಇಂದು ಪ್ರಧಾನಿ ಮೋದಿ ಸಭೆ ನಡೆಯಲಿದ್ದಾರೆ.
ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಕರ್ನಾಟಕ, ಮಹಾರಾಷ್ಟ್ರ, ಆಂಧ್ರ ಪ್ರದೇಶ, ದೆಹಲಿ, ಪಂಜಾಬ್ ಮುಖ್ಯಮಂತ್ರಿಗಳ ಜೊತೆ ಪ್ರಧಾನಿಗಳು ಸಮಾಲೋಚನೆ ಮಾಡಲಿದ್ದಾರೆ.
ಈ ವೇಳೆ ಕೊರೊನಾ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಬಗ್ಗೆ ರಾಜ್ಯಗಳಿಗೆ ಸೂಚಿಸುವ ನಿರೀಕ್ಷೆ ಇದೆ.
ಅಲ್ಲದೆ ಸಭೆಯಲ್ಲಿ ಕರ್ನಾಟಕದಲ್ಲಿ ಕೊರೊನಾ ಸ್ಥಿತಿಗತಿ ಬಗ್ಗೆ ಪ್ರಧಾನಿಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ವಿವರಣೆ ನೀಡಲಿದ್ದಾರೆ.
ಅಲ್ಲದೇ ಶಾಲಾ-ಕಾಲೇಜು, ಥಿಯೇಟರ್‍ಗಳನ್ನ ತೆರೆಯುವ ಬಗ್ಗೆಯೂ ಚರ್ಚೆ ಆಗುವ ನಿರೀಕ್ಷೆ ಇದೆ.








