ಇತ್ತೀಚೆಗೆ ಕೋಳಿ ಮಾಂಸ ತಿಂದರೆ ಕೊರೊನಾ ವೈರಸ್ ಬರುತ್ತದೆ ಎಂಬ ವಿಚಾರ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದು, ಈ ವಿಚಾರದ ಕುರಿತು ಕೋಳಿ ಮಾಂಸಕ್ಕೂ ಕೊರೊನಾ ವೈರಸ್ ಗೂ ಯಾವುದೇ ಸಂಬಂಧ ಇಲ್ಲ ಎಂದು ರಾಜ್ಯ ಆರೋಗ್ಯ ಇಲಾಖೆ ಹೇಳಿದೆ. ಇದುವರೆಗೂ ಕೋಳಿ ಮಾಂಸದಿಂದ ಕೊರೊನಾ ವೈರಸ್ ಹರಡುತ್ತದೆ ಎಂಬುದಕ್ಕೆ ವೈಜ್ಞಾನಿಕ ಆಧಾರ ತಿಳಿದು ಬಂದಿಲ್ಲ. ಹಾಗಾಗಿ ಯಾರೂ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದಿದೆ. ಕೋಳಿ ಮಾಂಸದಿಂದ ವೈರಸ್ ಹರಡುತ್ತದೆ ಎಂಬುದು ಸತ್ಯವಲ್ಲ. ಯಾರೂ ವದಂತಿಗಳನ್ನು ನಂಬಬಾರದು ಮತ್ತು ಹರಡಿಸಬಾರದು. ಒಂದು ವೇಳೆ ಯಾರಾದ್ರೂ ವದಂತಿಗಳನ್ನು ಹರಡುವ ಕೆಲಸ ಮಾಡಿದ್ರೆ ಕಾನೂನಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ಸಹ ನೀಡಿದೆ.
ಉತ್ತರ ಪ್ರದೇಶದಲ್ಲಿ ಮೂರನೇ ಬಾರಿ ಅಧಿಕಾರಕ್ಕೆ ಬಿಜೆಪಿ ತಂತ್ರ: ‘ಮಿಷನ್ ಯುಪಿ 2027’
ಭಾರತೀಯ ಜನತಾ ಪಾರ್ಟಿ ಉತ್ತರ ಪ್ರದೇಶದಲ್ಲಿ ಸತತ ಮೂರನೇ ಅವಧಿಗೆ ಅಧಿಕಾರವನ್ನು ಮರಳಿ ಪಡೆಯಲು ಹೊಸ ರಾಜಕೀಯ ತಂತ್ರವನ್ನು ರೂಪಿಸಿದೆ. ಈ ತಂತ್ರಕ್ಕೆ ಆರ್ಎಸ್ಎಸ್ ಸಹ ಒಪ್ಪಿಗೆ...








