ಇತ್ತೀಚೆಗೆ ಕೋಳಿ ಮಾಂಸ ತಿಂದರೆ ಕೊರೊನಾ ವೈರಸ್ ಬರುತ್ತದೆ ಎಂಬ ವಿಚಾರ ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿದ್ದು, ಈ ವಿಚಾರದ ಕುರಿತು ಕೋಳಿ ಮಾಂಸಕ್ಕೂ ಕೊರೊನಾ ವೈರಸ್ ಗೂ ಯಾವುದೇ ಸಂಬಂಧ ಇಲ್ಲ ಎಂದು ರಾಜ್ಯ ಆರೋಗ್ಯ ಇಲಾಖೆ ಹೇಳಿದೆ. ಇದುವರೆಗೂ ಕೋಳಿ ಮಾಂಸದಿಂದ ಕೊರೊನಾ ವೈರಸ್ ಹರಡುತ್ತದೆ ಎಂಬುದಕ್ಕೆ ವೈಜ್ಞಾನಿಕ ಆಧಾರ ತಿಳಿದು ಬಂದಿಲ್ಲ. ಹಾಗಾಗಿ ಯಾರೂ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ ಎಂದಿದೆ. ಕೋಳಿ ಮಾಂಸದಿಂದ ವೈರಸ್ ಹರಡುತ್ತದೆ ಎಂಬುದು ಸತ್ಯವಲ್ಲ. ಯಾರೂ ವದಂತಿಗಳನ್ನು ನಂಬಬಾರದು ಮತ್ತು ಹರಡಿಸಬಾರದು. ಒಂದು ವೇಳೆ ಯಾರಾದ್ರೂ ವದಂತಿಗಳನ್ನು ಹರಡುವ ಕೆಲಸ ಮಾಡಿದ್ರೆ ಕಾನೂನಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ಸಹ ನೀಡಿದೆ.
ಸ್ಟಿಂಗ್ ಪ್ರಕರಣದಲ್ಲಿ ಬಯಲಾಯಿತು ದೆಹಲಿ ನಂಟು: ಇದು ಬರೀ ಟ್ರೇಲರ್, ಪಿಕ್ಚರ್ ಅಭಿ ಬಾಕಿ ಹೈ ಎಂದು ಗುಡುಗಿದ ಪ್ರಿಯಾಂಕ್ ಖರ್ಗೆ
ಕಲಬುರಗಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧದ ಚರ್ಚಾಸ್ಪದ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರ ದೆಹಲಿ ನಿವಾಸದ ನಂಟು ಬಯಲಾಗುತ್ತಿದ್ದಂತೆಯೇ...








