ಇದೇನು ಚುನಾಯಿತ ಸರ್ಕಾರವೋ..? ಹುಚ್ಚರ ಸಂತೆಯೋ..?

1 min read
Lockdown

ಇದೇನು ಚುನಾಯಿತ ಸರ್ಕಾರವೋ..? ಹುಚ್ಚರ ಸಂತೆಯೋ..?

ಬೆಂಗಳೂರು : ಇದೇನು ಚುನಾಯಿತ ಸರ್ಕಾರವೋ? ಹುಚ್ಚರ ಸಂತೆಯೋ? ಎಂದು ಸರ್ಕಾರದ ದಿಢೀರ್ ಅರ್ಧ ಲಾಕ್ ಡೌನ್ ನಿರ್ಧಾರದ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಸರ್ಕಾರದ ವಿರುದ್ಧ ಸರಣಿ ಟ್ವೀಟ್ ಗಳನ್ನ ಮಾಡಿರುವ ಸಿದ್ದರಾಮಯ್ಯ, ಇದೇನು ಚುನಾಯಿತ ಸರ್ಕಾರವೋ..? ಹುಚ್ಚರ ಸಂತೆಯೋ..? ಕ್ಷಣ ಕ್ಷಣಕ್ಕೂ ಬದಲಾಗುವ ನಿರ್ಧಾರ- ಮಾರ್ಗಸೂಚಿಗಳು, ಅಘೋಷಿತ ಲಾಕ್ ಡೌನ್, ಅಮಾಯಕ ಜನತೆ ಮೇಲೆ ದೌರ್ಜನ್ಯ.

ಏನಿದು ಸಿಎಂ ಬಿಎಸ್ ಯಡಿಯೂರಪ್ಪ ಅವರೇ, ಆಡಳಿತ ನಡೆಸಲಾಗದಿದ್ದರೆ ಕುರ್ಚಿಬಿಟ್ಟು ತೊಲಗಿ, ಜನರನ್ನು ಯಾಕೆ ಗೋಳು ಹೊಯ್ಕೊಳ್ತೀರಿ.. ಎಂದು ಪ್ರಶ್ನಿಸಿದ್ದಾರೆ.

Karnataka emergency relief

ಕೊರೊನಾ ಉಲ್ಭಣಗೊಂಡಿರುವುದು ಸರ್ಕಾರದ ನಿರ್ಲಕ್ಷ್ಯ, ನಿಷ್ಕ್ರಿಯತೆ ಮತ್ತು ದುರಾಡಳಿತದಿಂದ. ತಮ್ಮ ವೈಫಲ್ಯ ಮುಚ್ಚಿಹಾಕಲು ಪೆÇಲೀಸರ ಕೈಗೆ ಲಾಠಿ ಕೊಟ್ಟು ಬೀದಿಗಿಳಿಸಿದರೆ ಕೊರೊನಾ ಓಡಿಹೋಗುವುದೇ ಬಿ.ಎಸ್.ಯಡಿಯೂರಪ್ಪ ಅವರೇ?

ಲಾಕ್ ಡೌನ್, ಬಂದ್, ಕಪ್ರ್ಯೂ ಇನ್ನೇನೋ, ಯಾವ ನಿರ್ಧಾರ ಕೈಗೊಳ್ಳುವುದಿದ್ದರೂ ಜನರಿಗೆ ಮನವರಿಕೆ ಮಾಡಿ, ವಿಶ್ವಾಸಕ್ಕೆ ತೆಗೆದುಕೊಂಡು ಪೂರ್ವಸಿದ್ದತೆಯೊಡನೆ ಮಾಡಿ. ತಟ್ಟೆ ಬಡಿಯುವ, ಕ್ಯಾಂಡಲ್ ಹಚ್ಚುವ ಶೈಲಿಯ ಇಂತಹ ತುಘಲಕ್ ದರ್ಬಾರ್ ಪುನರಾವರ್ತನೆ ಮಾಡಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ.

corona cases

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd