ಕೊರೊನಾರ್ಭಟಕ್ಕೆ ತತ್ತರಿಸಿದ ಜಗತ್ತು
ವಾಷ್ಟಿಂಗ್ಟನ್, ಜುಲೈ 7: ಕೊರೊನಾ ವೈರಸ್ ಅಟ್ಟಹಾಸಕ್ಕೆ ಜಗತ್ತೇ ತಲ್ಲಣಗೊಂಡಿದೆ. 240ಕ್ಕೂ ಹೆಚ್ಚು ದೇಶಗಳಲ್ಲಿ ಕೊರೊನಾ ಪ್ರಕರಣಗಳು ಮತ್ತು ಕೊರೊನಾದಿಂದ ಬಲಿಯಾದವರ ಸಂಖ್ಯೆ ಅತ್ಯಧಿಕ ಪ್ರಮಾಣದಲ್ಲಿ ಏರಿಕೆ ಕಂಡಿದೆ. ಜಗತ್ತಿನಾದ್ಯಂತ 5.38 ಲಕ್ಷ ಮಂದಿ ಮಹಾಮಾರಿಗೆ ಬಲಿಯಾಗಿದ್ದರೆ, ಸೋಂಕಿತರ ಸಂಖ್ಯೆ 1.16 ಕೋಟಿ ದಾಟಿದೆ. ವಿಶ್ವದಾದ್ಯಂತ ನಿನ್ನೆ ಮಧ್ಯರಾತ್ರಿವರೆಗೆ 5,38,550 ಮಂದಿ ಸಾವನ್ನಪ್ಪಿದ್ದರೆ, 1,16,54,427 ಸೋಂಕು ಪ್ರಕರಣಗಳು ವರದಿಯಾಗಿದೆ. ಇದರ ನಡುವೆಯೂ ವಿಶ್ವದಲ್ಲಿ ಸುಮಾರು 65.95 ಲಕ್ಷ ರೋಗಿಗಳು ಚೇತರಿಸಿಕೊಂಡಿದ್ದಾರೆ.

ಇದರ ನಡುವೆಯೂ ವಿಶ್ವದಲ್ಲಿ ಸುಮಾರು 65.95 ಲಕ್ಷ ರೋಗಿಗಳು ಚೇತರಿಸಿಕೊಂಡಿದ್ದಾರೆ ಅಥವಾ ಗುಣಮುಖರಾಗಿದ್ದಾರೆ. ಜಗತ್ತಿನಾದ್ಯಂತ ನಿನ್ನೆ ಮಧ್ಯರಾತ್ರಿವರೆಗೆ 5,36,900 ಮಂದಿ ಸಾವಿಗೀಡಾಗಿದ್ದು, 1,15,64,518 ಸೋಂಕು ಪ್ರಕರಣಗಳು ವರದಿಯಾಗಿದೆ.
ಸಕ್ರಿಯ ಪ್ರಕರಣಗಳ ಸಂಖ್ಯೆ 45.20 ಲಕ್ಷ ದಾಟಿದ್ದು, 58,700ಕ್ಕೂ ಹೆಚ್ಚು ರೋಗಿಗಳ ಸ್ಥಿತಿ ಚಿಂತಾಜನಕವಾಗಿದೆ. ವಿಶ್ವದಲ್ಲಿ ಈವರೆಗೆ 65,95,493 ಮಂದಿ ಕೊರೊನಾ ಸೋಂಕಿತರು ಗುಣಮುಖರಾಗಿದ್ದಾರೆ. ಅಮೆರಿಕ, ಬ್ರೆಜಿಲ್, ಭಾರತ, ರಷ್ಯಾ, ಮತ್ತು ಇಂಗ್ಲೆಂಡ್ ದೇಶಗಳು ವಿಶ್ವದ ಟಾಪ್ 5 ಕೊರೊನಾ ಪೀಡಿತ ದೇಶಗಳಾಗಿವೆ.








