ಕಲಬುರಗಿ : ದೇಶದಲ್ಲಿ ಕೊರೊನಾ ತನ್ನ ಕದಂಬ ಬಾಹುಗಳನ್ನು ಚಾಚುತ್ತಲೇ ಇದೆ. ಕೊರೊನಾ ನಿಯಂತ್ರಣ ಮಾಡಲು ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಇಲಾಖೆ ಮತ್ತು ಆಶಾ ಕಾರ್ಯಕರ್ತೆಯರು ಶ್ರಮಿಸುತ್ತಿದ್ದಾರೆ.
ತಮ್ಮ ಪ್ರಾಣದ ಹಂಗು ತೊರೆದು ಕೊರೊನಾ ನಿಯಂತ್ರಣಕ್ಕೆ ಶ್ರಮಿಸುತ್ತಿರುವ ಕೊರೊನಾ ವಾರಿಯರ್ ಆಶಾ ಕಾರ್ಯಕರ್ತೆಯ ಮೇಲೆ ದಾಳಿ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಶಾಂಪುರದಹಳ್ಳಿಯಲ್ಲಿ ಕೊರೊನಾ ವಾರಿಯರ್ ಆಶಾ ಕಾರ್ಯಕರ್ತೆ ಮೇಲೆ ಕಾರದಪುಡಿ ಎರಚಿ, ರಾಡ್ ನಿಂದ ದಾಳಿ ಮಾಡಿದ್ದಾರೆ
ಶಾಂಪುರದಹಳ್ಳಿಯಲ್ಲಿ ಕ್ವಾರಂಟೈನ್ ನಲ್ಲಿದ್ದ ಮೂವರಿಗೆ ಕೊರೊನಾ ಪಾಸಿಟಿವ್ ಕೇಸಸ್ ಪತ್ತೆಯಾಗಿತ್ತು. ಇದರಿಂದಾಗಿ ಮತ್ತೆ ಅಲ್ಲಿರುವ ಮೂರ ಜನಕ್ಕೆ ಸೋಂಕು ಕಾಣಿಸಿಕೊಂಡಿತ್ತು. ಹಾಗಾಗಿ ಸೋಂಕಿತರನ್ನು ಐಸೋಲೇಷನ್ ವಾರ್ಡ್ ಗೆ ಕರೆದೊಯ್ಯಲಾಗಿತ್ತು. ಬಳಿಕ ಮೇಲಧಿಕಾಗಳ ಸೂಚನೆ ಮೇರೆಗೆ ಅಶಾ ಕಾರ್ಯಕರ್ತೆ ಜ್ಯೋತಿ ಮಾಹಿತಿ ಪಡೆಯಲೆಂದ ಸೋಂಕಿತ ಮನೆಗೆ ತೆರಳಿದ್ದರು. ಈ ವೇಳೆ ನಮ್ಮ ಮನೆಯವರನ್ನು ಉದ್ದೇಶಪೂರ್ವಕವಾಗಿಯೇ ಆಸ್ಪತ್ರೆಗೆ ಕಳುಹಿಸಿಕೊಟ್ಟದ್ದೀ ಎಂದು ಸೋಂಕಿತರ ಕುಟುಂಬದ ಸದಸ್ಯರು ಜ್ಯೋತಿ ಅವರಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ಜೊತೆಗೆ ಆಶಾ ಕಾರ್ಯಕರ್ತೆ ಜ್ಯೋತಿ ಪವಾರ್ ಮತ್ತು ಆಕೆ ಪತಿ ಮೇಲೆ ಹಲ್ಲೆ ಮಾಡಲಾಗಿದೆ ಎಂಬ ಆರೋಪ ಕೇಳಿ ಬಂದಿದೆ.








