ಬೆಂಗಳೂರು: ಕರ್ನಾಟಕದ ಪಾಲಿಗೆ ಬುಧವಾರ ಕೊರೊನಾ ಮಹಾಸ್ಫೋಟವಾಗಿದೆ. ಇದೇ ಮೊದಲ ಬಾರಿಗೆ ಸೋಂಕಿನ ಸಂಖ್ಯೆ 2 ಸಾವಿರ ಗಡಿ ದಾಟುವ ಮೂಲಕ ದಾಖಲೆ ಬರೆದಿದೆ.
ರಾಜ್ಯದಲ್ಲಿ ಇಂದು ಬರೋಬ್ಬರಿ 2062 ಕೊರೊನಾ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 28, 877ಕ್ಕೆ ಏರಿಕೆಯಾಗಿದೆ. ಇಂದು ಒಂದೇ ದಿನ ಬರೋಬ್ಬರಿ 54 ಮಂದಿ ಮಹಾಮಾರಿಗೆ ಉಸಿರು ನಿಲ್ಲಿಸಿದ್ದಾರೆ.
ರಾಜಧಾನಿ ಬೆಂಗಳೂರಿನಲ್ಲೂ ಇಂದು ಬರೋಬ್ಬರಿ 1148 ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇದರೊಂದಿಗೆ ನಗರದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 12 ಸಾವಿರ ಗಡಿ ದಾಟಿದೆ.
ಭಾನುವಾರ ಲಾಕ್‍ಡೌನ್ ಸೇರಿದಂತೆ ರಾಜ್ಯ ಸರ್ಕಾರ ಯಾವುದೇ ಕಟ್ಟುನಿಟ್ಟಿನ ಕ್ರಮ ತೆಗೆದುಕೊಂಡಿದ್ದರೂ ಸೋಂಕು ಹರಡುವಿಕೆ ತಡೆಗಟ್ಟಲು ಸಾಧ್ಯವಾಗಿಲ್ಲ. ದಿನದಿಂದ ದಿನಕ್ಕೆ ಸಾವಿರ ಸಾವಿರ ಸಂಖ್ಯೆಯಲ್ಲಿ ಕೊರೊನಾ ಪ್ರಕರಣಗಳು ದಾಖಲಾಗುತ್ತಿರುವುದು ನಾಗರಿಕರಲ್ಲಿ ಮತ್ತಷ್ಟು ಆತಂಕ ಹೆಚ್ಚಿಸಿದೆ.
ಸರ್ಕಾರಿ ನೌಕರಿಯ ಕನಸು ಕಾಣುತ್ತಿರುವವರಿಗೆ ಗುಡ್ ನ್ಯೂಸ್ ಕಂದಾಯ ಇಲಾಖೆಯಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ
ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಬೇಕು ಹಾಗೂ ಉತ್ತಮ ಭವಿಷ್ಯವನ್ನು ರೂಪಿಸಿಕೊಳ್ಳಬೇಕು ಎಂಬ ಕನಸು ಹೊತ್ತಿರುವ ನಾಡಿನ ಅಸಂಖ್ಯಾತ ಉದ್ಯೋಗಾಕಾಂಕ್ಷಿಗಳಿಗೆ ಹಾಗೂ ಅನುಭವಿ ವೃತ್ತಿಪರರಿಗೆ ಕರ್ನಾಟಕ ರಾಜ್ಯ ಕಂದಾಯ...








