ಬೆಂಗಳೂರು : ಕರ್ನಾಟಕದಲ್ಲಿ ಹಲವಾರು ಮುನ್ನೆಚ್ಚರಿಕಾ ಕ್ರಮಗಳ ನಡುವೆಯೂ ಕೊರೊನಾ ರಣ ಕೇಕೆ ಮುಂದುವರಿದದಿದೆ. ಇಂದು ಒಂದೇ ದಿನ ರಾಜ್ಯದಲ್ಲಿ 2496 ಹೊಸ ಪ್ರಕರಣಗಳು ಪತ್ತೆಯಾಗಿದ್ದು, 87 ಮಂದಿ ಸಾವನ್ನಪ್ಪಿದ್ದಾರೆ.
ಕರ್ನಾಟಕ ಆರೋಗ್ಯ ಇಲಾಖೆ ಮಾಹಿತಿ ಪ್ರಕಾರ, ಕರ್ನಾಟಕದಲ್ಲಿ ಇಂದು ಹೊಸದಾಗಿ 2496 ಮಂದಿಗೆ ಸೋಂಕು ಇರೋದು ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯಾದ್ಯಂತ ಒಟ್ಟಾರೆ ಸೋಂಕಿತರ ಸಂಖ್ಯೆ 44,077ಕ್ಕೆ ಏರಿಕೆಯಾಗಿದೆ.
ಹೆಮ್ಮಾರಿ ಹೊಡೆತಕ್ಕೆ ಕಳೆದ 24 ಗಂಟೇಲಿ 87 ಮಂದಿ ಸೋಂಕಿತರು ಬಲಿಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಕೊರೊನಾ ವೈರಸ್ ಗೆ ಬಲಿಯಾದವರ ಸಂಖ್ಯೆ 844ಕ್ಕೆ ಏರಿಕೆಯಾಗಿದೆ.
ಅದರಲ್ಲೂ ಆತಂಕಕಾರಿ ವಿಷ್ಯ ಏನೆಂದರೇ ರಾಜಧಾನಿ ಬೆಂಗಳೂರು ನಗರವೊಂದರಲ್ಲಿಯೇ 56 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. ಇದಲ್ಲದೇ ಇಂದೂ ಕೂಡ ಮೆಟ್ರೋ ನಗರಿಯಲ್ಲಿ ಮತ್ತೆ ಹೊಸ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದ್ದು, ಇಂದು 1267 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ.
ಇಂದು ರಾಜ್ಯಾದ್ಯಂತ 844 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ.








