ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ನ ನಾಗಾಲೋಟ ಮುಂದುವರಿದಿದೆ. ಕಳೆದ 24 ಗಂಟೇಲಿ ಬರೋಬ್ಬರಿ 49,310 ಸೋಂಕಿತರು ಪತ್ತೆಯಾಗಿದ್ದು, 740 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೋವಿಡ್ ಸೋಂಕಿತರ ಸಂಖ್ಯೆ 12,87,945ಕ್ಕೆ ಹಾಗೂ ಮೃತರ ಸಂಖ್ಯೆ 30,601ಕ್ಕೆ ಏರಿಕೆಯಾಗಿದೆ.
ದೇಶದ ಒಟ್ಟು ಸೋಂಕಿತರ ಪೈಕಿ 8,17,209 ಮಂದಿ ಸದ್ಯ ಕೊರೊನಾ ಸೋಂಕಿನಿಂದ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 4,40,135 ಕೇಸ್ ಗಳು ಸಕ್ರಿಯವಾಗಿವೆ ಎಂದು ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.








