ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ರಾಕೆಟ್ ವೇಗದಲ್ಲಿ ಏರಿಕೆ ಆಗುತ್ತಿದ್ದರೂ, ಇತ್ತ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವವರ ಸಂಖ್ಯೆಯೂ ಕೂಡ ಹೆಚ್ಚಳವಾಗುತ್ತಿದೆ.
ಕೇಂದ್ರ ಕೇಂದ್ರ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 18,522 ಸೋಂಕಿತರು ಪತ್ತೆಯಾಗಿದ್ದು, 418 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಸೋಂಕಿತರ ಸಂಖ್ಯೆ 5,66,840ಕ್ಕೆ ಹಾಗೂ ಮೃತರ ಸಂಖ್ಯೆ 16,893ಕ್ಕೆ ಏರಿಕೆಯಾಗಿದೆ.
ದೇಶದಲ್ಲಿ ಚೇತರಿಕೆಯ ಪ್ರಮಾಣದಲ್ಲಿ ಕೂಡ ಗಣನೀಯ ಏರಿಕೆ ಕಂಡು ಬಂದಿದ್ದು, 5,66,840 ಕೊರೊನಾ ಸೋಂಕು ಪ್ರಕರಣಗಳ ಪೈಕಿ 3,34,822 ಮಂದಿ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ. ಉಳಿದಂತೆ 2,15,125 ಕೇಸ್ ಗಳು ಸಕ್ರಿಯವಾಗಿವೆ.








