ಕರ್ನಾಟಕ ಸಿಎಂ ಬಿ ಎಸ್ ಯಡಿಯೂರಪ್ಪಗೆ ಕೊರೋನಾ ಸೋಂಕು – ಆಸ್ಪತ್ರೆಗೆ ದಾಖಲು
ಬೆಂಗಳೂರು, ಅಗಸ್ಟ್ 3: ಕರ್ನಾಟಕ ಸಿಎಂ ಬಿ ಎಸ್ ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಅವರು ಆರೋಗ್ಯವಾಗಿದ್ದು, ಯಾವುದೇ ರೋಗಲಕ್ಷಣಗಳು ಕಾಣಿಸಿಕೊಂಡಿಲ್ಲ. ಆದರೆ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಅವರು ಕೋರಿದ್ದಾರೆ.
ತಮ್ಮ ಟ್ವೀಟರ್ ಖಾತೆಯಲ್ಲಿ ತಮಗೆ ಕೊರೋನಾ ಸೋಂಕು ತಗುಲಿರುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.
ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಅವರು ಟ್ವೀಟ್ ಮಾಡಿದ್ದಾರೆ.