ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇವತ್ತು ಇಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ದೆಹಲಿಯಿಂದ ರೈಲಿನಲ್ಲಿ ಪ್ರಯಾಣಿಸಿದ್ದು ಮೇ 28ರಂದು ಕ್ವಾರಂಟೈನ್ ನಲ್ಲಿರಿಸಲಾಗಿದ್ದ 25ರ ಹರೆಯದ ವ್ಯಕ್ತಿಗೆ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅವರನ್ನು ವೆನ್ಲಾಕ್ ಗೆ ದಾಖಲಿಸಲಾಗಿದೆ. ಮತ್ತೊಬ್ಬರು ಪುಣೆಯಿಂದ ಆಗಮಿಸಿ ಕಾರ್ಕಳದಲ್ಲಿ ಕ್ವಾರಂಟೈನ್ ನಲ್ಲಿ ಇರಿಸಲಾಗಿತ್ತು. ಕ್ವಾರಂಟೈನ್ ಅವಧಿ ಪೂರ್ಣಗೊಳಿಸಿದ ಬಳಿಕ ಕಟೀಲು ಗ್ರಾಮದ ಪಟ್ಟೆಜಾಲು ಎಂಬಲ್ಲಿರುವ ತಮ್ಮ ಮನೆಯಲ್ಲಿ ವಾಸವಿದ್ದು, ಜ್ವರದ ಲಕ್ಷಣಗಳು ಕಂಡುಬಂದ ಕಾರಣ, ಮೂಲ್ಕಿ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಇವರಿಗೂ ಕೊರೊನಾ ಸೋಂಕು ದೃಢಪಟ್ಟಿದ್ದು, ಇವರು 36 ವರ್ಷದ ವ್ಯಕ್ತಿ.
ಇನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 4 ಮಂದಿ ಕೊರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದವರು ಬಿಡುಗಡೆಗೊಂಡಿದ್ದಾರೆ. ಇದರೊಂದಿಗೆ ಒಟ್ಟು 73 ಮಂದಿ ಡಿಸ್ಚಾರ್ಜ್ ಆದಂತಾಗಿದೆ. ಅಂತೆಯೇ ಇಂದು 75 ಮಂದಿಯ ಸ್ಯಾಂಪಲ್ ಕಳುಹಿಸಲಾಗಿದೆ. ಇವತ್ತು ದೊರಕಿದ ಸ್ಯಾಂಪಲ್ ಗಳು 34. ಇನ್ನು 46 ಮಂದಿಯ ಸ್ಯಾಂಪಲ್ ಗಳ ಪರೀಕ್ಷಾ ವರದಿ ಬರಲು ಬಾಕಿ ಇವೆ. ದ.ಕ. ಜಿಲ್ಲೆಯ ಸ್ಥಿತಿ ಹೀಗಿದೆ. ಒಟ್ಟು 139 (10 ಅನ್ಯಜಿಲ್ಲೆ, ರಾಜ್ಯದ್ದು) ಪಾಸಿಟಿವ್. 7 ಸಾವು. 73 ಬಿಡುಗಡೆ. 59 ಮಂದಿಗೆ ಚಿಕಿತ್ಸೆ.








