ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್-ಶಾಗೆ ಕೊರೋನಾ ಸೋಂಕು
ಬೆಂಗಳೂರು, ಅಗಸ್ಟ್ 18: ಬಯೋಕಾನ್ ಅಧ್ಯಕ್ಷೆ ಕಿರಣ್ ಮಜುಂದಾರ್-ಶಾ ಅವರಿಗೆ ಕೊರೋನವೈರಸ್ ಸೋಂಕು ದೃಢಪಟ್ಟಿದೆ. ಅವರು ಪ್ರಸ್ತುತ ವೈರಲ್ ಸೋಂಕಿನ ಲಘ ಲಕ್ಷಣಗಳನ್ನು ಹೊಂದಿದ್ದಾರೆಂದು ಮಾಹಿತಿ ನೀಡಿದ್ದಾರೆ.

ಮಜುಂದಾರ್-ಶಾ ಸೋಮವಾರ ತಮ್ಮ ಟ್ವಿಟರ್ ಖಾತೆಯಲ್ಲಿ ತನಗೆ ಕೊರೋನಾ ಸೋಂಕು ತಗುಲಿರುವುದನ್ನು ಪ್ರಕಟಿಸಿದ್ದಾರೆ. ನನಗೆ ಕೋವಿಡ್-19 ಸೋಂಕು ದೃಢಪಟ್ಟಿದ್ದು, ಕೊರೋನಾ ಸೋಂಕಿನ ಲಘು ಲಕ್ಷಣಗಳು ಕಾಣಿಸಿಕೊಂಡಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.

ಕಿರಣ್ ಮಜುಂದಾರ್-ಶಾ ಅವರು ಟ್ವೀಟ್ ಅನ್ನು ಪೋಸ್ಟ್ ಮಾಡಿದ ನಂತರ, ಹಲವಾರು ಜನರು ಶೀಘ್ರವಾಗಿ ಚೇತರಿಸಿಕೊಳ್ಳಬೇಕೆಂದು ಹಾರೈಸಿದ್ದಾರೆ








