ರಾಮ ಮಂದಿರ ಟ್ರಸ್ಟ್ ಮುಖ್ಯಸ್ಥ ಮಹಂತ್ ನರ್ತ್ಯ ಗೋಪಾಲ್ ದಾಸ್ ಗೆ ಕೊರೋನಾ ಸೋಂಕು
ಲಕ್ನೋ, ಆಗಸ್ಟ್ 13 : ಶ್ರೀ ರಾಮ ಜನ್ಮಭೂಮಿ ಟ್ರಸ್ಟ್ನ ಅಧ್ಯಕ್ಷರಾದ ಮಹಂತ್ ನರ್ತ್ಯ ಗೋಪಾಲ್ ದಾಸ್ ಅವರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಮಹಂತ್ ಅವರು ಮಥುರಾದಲ್ಲಿದ್ದು, ಅಲ್ಲಿಗೆ ಅವರು ಶ್ರೀ ಕೃಷ್ಣ ಜನಮಾಷ್ಟಮಿ ಆಚರಣೆಗೆ ಹೋಗಿದ್ದರು. ಅಯೋಧ್ಯೆ ಭೂಮಿ ಪೂಜೆ ಸಂದರ್ಭದಲ್ಲಿ ಮಹಂತ್ ನರ್ತ್ಯ ಗೋಪಾಲ್ ದಾಸ್, ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದರು.
ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವೈದ್ಯಕೀಯ ತಜ್ಞರೊಂದಿಗೆ ಮಾತನಾಡಿದ್ದು ಮಹಂತ್ ನರ್ತ್ಯ ಗೋಪಾಲ್ ದಾಸ್ ಅವರನ್ನು ಮೆಡಂತ ಆಸ್ಪತ್ರೆಗೆ ಸ್ಥಳಾಂತರಿಸುವ ಸಾಧ್ಯತೆಯಿದೆ.








