ಕೊರೊನಾ ಎರಡನೇ ಅಲೆ ಪ್ರಾರಂಭವಾಗಿರೋದು ಸ್ಪಷ್ಟ : ಡಾ.ಕೆ.ಸುಧಾಕರ್
ಬೆಂಗಳೂರು : ಕಳೆದ 15 ದಿನಗಳಿಂದ ಏಂಟರಿಂದ ಹತ್ತು ರಾಜ್ಯಗಳಲ್ಲಿ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾಗುತ್ತಿವೆ.
ಇದನ್ನ ಗಮನಿಸಿದ್ರೆ ದೇಶದಲ್ಲಿ 2ನೇ ಕೊರೊನಾ ಅಲೆ ಪ್ರಾರಂಭವಾಗಿರುವುದು ಸ್ಪಷ್ಟವಾಗಿ ಗೊತ್ತಾಗುತ್ತಿದೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದೆ.
ಈ ಸಂದರ್ಭದಲ್ಲಿ ನಮ್ಮ ಟಲುವಟಿಕೆಗಳಿಗೆ ನಿರ್ಬಂಧ, ನಿಯಂತ್ರಣ ಹೇರದಿದ್ದರೇ ಅಪಾಯ ತಪ್ಪಿದ್ದಲ್ಲ ಎಂದು ಎಚ್ಚರಿಸಿದರು.
ಹಾಗೆ ಗುಂಪಿರುವ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಿ, ಅಂತರ ಕಾಯ್ದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಇನ್ನು ರಾಜ್ಯದಲ್ಲಿ ಪಾಸಿಟಿವಿಟಿ ರೇಟ್ 1.6% ಇದ್ದು, ದೇಶದಲ್ಲಿ ಅತೀ ಹೆಚ್ಚು ಟೆಸ್ಟಿಂಗ್ ನಮ್ಮ ರಾಜ್ಯದಲ್ಲಾಗುತ್ತಿದೆ.
34ಲಕ್ಷಕ್ಕೂ ಹೆಚ್ಚು ಜನರಿಗೆ ಈಗಾಗಲೇ ಲಸಿಕೆ ನೀಡಲಾಗಿದೆ. ಬೀದರ್, ಧಾರವಾಡ ಮತ್ತು ಗದಗ್ ನಲ್ಲಿ ಶೇ.100ಕ್ಕಿಂತ ಹೆಚ್ಚು ಲಸಿಕೆ ಕೊಡಲಾಗಿದೆ.
ಬೆಂಗಳೂರು ನಗರ, ಬಾಗಲಕೋಟೆ, ದಾವಣಗೆರೆ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಶೇ.65ಕ್ಕಿಂತ ಕಡಿಮೆ ಪ್ರಮಾಣದಲ್ಲಿ ವ್ಯಾಕ್ಸಿನ್ ವಿತರಣೆಯಾಗಿದೆ ಎಂದು ಸುಧಾಕರ್ ಮಾಹಿತಿ ನೀಡಿದರು.
